ADVERTISEMENT

ಅಫ್ಗಾನಿಸ್ತಾನದಿಂದ ಭಾರತೀಯರನ್ನು ಕರೆತರಲು ಎಲ್ಲಾ ಪ್ರಯತ್ನ: ಸಿಂಧಿಯಾ

ಪಿಟಿಐ
Published 18 ಆಗಸ್ಟ್ 2021, 8:19 IST
Last Updated 18 ಆಗಸ್ಟ್ 2021, 8:19 IST
ಜ್ಯೋತಿರಾದಿತ್ಯ ಸಿಂಧಿಯಾ
ಜ್ಯೋತಿರಾದಿತ್ಯ ಸಿಂಧಿಯಾ   

ಶಹಜಪುರ: ‘ಅಫ್ಗಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್‌ ಕರೆತರಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ’ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ಕೊರೊನಾ ಪಿಡುಗಿನ ವೇಳೆ ವಿವಿಧ ದೇಶಗಳಲ್ಲಿ ಸಿಲುಕಿದ್ದ ಭಾರತೀಯರನ್ನು ’ವಂದೇ ಭಾರತ್‌ ಮಿಷನ್‌’ ಮೂಲಕ ದೇಶಕ್ಕೆ ಕರೆತರಲಾಯಿತು. ಅದೇ ರೀತಿ ಭಾರತೀಯ ವಾಯುಪಡೆ, ಏರ್‌ ಇಂಡಿಯಾ ಸೇರಿದಂತೆ ಸಾಧ್ಯವಾದ ಎಲ್ಲಾ ಮಾರ್ಗಗಳಿಂದ ಭಾರತೀಯರನ್ನು ಕರೆತರಲಾಗುವುದು’ ಎಂದು ಸಿಂಧಿಯಾ ತಿಳಿಸಿದ್ದಾರೆ.

ಮಧ್ಯಪ್ರದೇಶದ ಶಹಜಪುರದಲ್ಲಿ ‘ಜನ ಆರ್ಶೀವಾದ ಯಾತ್ರೆ’ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಅಫ್ಗಾನಿಸ್ತಾನದಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯವನ್ನು ಶುಕ್ರವಾರವೇ ಆರಂಭಿಸಿದೆ. ಈ ಪ್ರಕ್ರಿಯೆ ಮೂರು ದಿನಗಳವರೆಗೆ ಮುಂದುವರಿಯಿತು. ಆದರೆ, ಭಾನುವಾರ, ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಗುಂಡಿನ ಸದ್ದು ಕೇಳಿಸಿದ ಕಾರಣ ವಿಮಾನ ಮಾರ್ಗವನ್ನು ಮುಚ್ಚಲಾಗಿತ್ತು. ಇದರಿಂದಾಗಿ ಸೋಮವಾರ ಸ್ಥಳಾಂತರ ಪ್ರಕ್ರಿಯೆಗೆ ಅಡ್ಡಿ ಉಂಟಾಗಿತ್ತು. ಆದರೆ, ಮಂಗಳವಾರ ವಾಯುಪಡೆಯ ವಿಮಾನದ ಮೂಲಕ ಭಾರತೀಯ ನಾಗರಿಕರನ್ನು ಕರೆತರಲಾಯಿತು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.