ADVERTISEMENT

ಪ್ರವಾಹ ಪರಿಸ್ಥಿತಿ ಅಧ್ಯಯನ ನಡೆಸಲು ರಾಜ್ಯಕ್ಕೆ ಕೇಂದ್ರ ತಂಡ: ತ್ರಿಪುರಾ ಸಿಎಂ

ಪಿಟಿಐ
Published 27 ಆಗಸ್ಟ್ 2024, 2:42 IST
Last Updated 27 ಆಗಸ್ಟ್ 2024, 2:42 IST
<div class="paragraphs"><p>ತ್ರಿಪುರಾ ಮುಖ್ಯಮಂತ್ರಿ ಮಾಣಿಕ್‌ ಸಹಾ</p></div>

ತ್ರಿಪುರಾ ಮುಖ್ಯಮಂತ್ರಿ ಮಾಣಿಕ್‌ ಸಹಾ

   

ಪಿಟಿಐ ಚಿತ್ರ

ಅಗರ್ತಲಾ: ಮಳೆ ಮತ್ತು ಪ್ರವಾಹದಿಂದ ಆಗಿರುವ ನಷ್ಟದ ಕುರಿತು ಅಧ್ಯಯನ ನಡೆಸಲು ರಾಜ್ಯಕ್ಕೆ ಕೇಂದ್ರ ತಂಡವನ್ನು ಕಳುಹಿಸಲಿದೆ ಎಂದು ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ತಿಳಿಸಿದ್ದಾರೆ.

ADVERTISEMENT

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವಾಹದಿಂದ ಉಂಟಾದ ಹಾನಿಯನ್ನು ಅಧ್ಯಯನ ನಡೆಸಲು ಶೀಘ್ರದಲ್ಲೇ ಕೇಂದ್ರ ತಂಡವನ್ನು ಕಳುಹಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನನಗೆ ಭರವಸೆ ನೀಡಿದ್ದಾರೆ. ಕೇಂದ್ರ ತಂಡವು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ‘ ಎಂದು ಅವರು ಹೇಳಿದ್ದಾರೆ.

ರಾಜ್ಯಕ್ಕೆ ಆರ್ಥಿಕ ನೆರವು ನೀಡಿದ ಮಧ್ಯಪ್ರದೇಶ ಸಿಎಂ ಮೋಹನ್‌ ಯಾದವ್‌ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಸಹಾ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ ಪುನಶ್ಚೇತನ ಕಾರ್ಯಗಳಿಗಾಗಿ ಸಿಎಂ ಯೋಗಿ ಆದಿತ್ಯನಾಥ್‌ ರಾಜ್ಯಕ್ಕೆ ₹10 ಕೋಟಿ ದೇಣಿಗೆ ನೀಡಿದ್ದಾರೆ. ಮಧ್ಯಪ್ರದೇಶ ಸರ್ಕಾರವು ₹20 ಕೋಟಿ ಆರ್ಥಿಕ ನೆರವು ಘೋಷಿಸಿದೆ ಎಂದು ಸಹಾ ಹೇಳಿದ್ದಾರೆ.

ಪ್ರವಾಹದಿಂದಾಗಿ 26 ಮಂದಿ ಮೃತಪಟ್ಟಿದ್ದಾರೆ. ಒಟ್ಟು 17 ಲಕ್ಷ ಜನರು ಸಂತ್ರಸ್ತರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರಲ್ಲಿ 1.37 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ. ಪ್ರವಾಹದಿಂದಾಗಿ ರಸ್ತೆಗಳು, ಕಟ್ಟಡಗಳು, ವಿದ್ಯುತ್‌ ಕಂಬಗಳು ಮತ್ತು ಕೃಷಿ ಭೂಮಿಗೆ ವ್ಯಾಪಕ ಹಾನಿಯಾಗಿದೆ. ಪ್ರವಾಹದಿಂದ ಸುಮಾರು ₹15,000 ಕೋಟಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. 471 ಪರಿಹಾರ ಶಿಬಿರಗಳಲ್ಲಿ ಸುಮಾರು 70,000 ಮಂದಿ ಸಂತ್ರಸ್ತರು ಇದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.