ADVERTISEMENT

ಚೈತನ್ಯಾನಂದ ಸರಸ್ವತಿ ಜಾಮೀನು: ಆದೇಶ ಕಾಯ್ದಿರಿಸಿದ ದೆಹಲಿ ನ್ಯಾಯಾಲಯ

ಪಿಟಿಐ
Published 26 ಸೆಪ್ಟೆಂಬರ್ 2025, 14:07 IST
Last Updated 26 ಸೆಪ್ಟೆಂಬರ್ 2025, 14:07 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರು ತಮ್ಮ ವಿರುದ್ಧದ ವಂಚನೆ, ನಕಲು ಹಾಗೂ ಕ್ರಿಮಿನಲ್‌ ಪಿತೂರಿ ಆರೋ‍ಪಗಳ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ದೆಹಲಿ ನ್ಯಾಯಾಲಯ, ಆದೇಶವನ್ನು ಕಾಯ್ದಿರಿಸಿದೆ. 

ಹೆಚ್ಚುವರಿ ಸೆಷನ್ಸ್‌ ನ್ಯಾಯಧೀಶೆ ಹರ್ದೀಪ್‌ ಕೌರ್‌ ಅವರು ಶುಕ್ರವಾರ ಸಂಜೆ ಅಥವಾ ಶನಿವಾರ ಆದೇಶವನ್ನು ಪ್ರಕಟಿಸಲಿದ್ದಾರೆ. 

ಶ್ರೀ ಶಾರದಾ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯನ್‌ ಮ್ಯಾನೇಜ್‌ಮೆಂಟ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆಯೂ ಚೈತನ್ಯಾನಂದ ಸರಸ್ವತಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. 

ADVERTISEMENT

‘ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಂ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಂ’ ಸಂಸ್ಥೆಯ ಆಸ್ತಿಯನ್ನು ಲಾಭಕ್ಕಾಗಿ ಖಾಸಗಿ ಕಂಪನಿಗಳಿಗೆ ಬಿಟ್ಟುಕೊಡುವ ಮೂಲಕ ಚೈತನ್ಯಾನಂದ ಅವರು ಸಂಸ್ಥೆಯ ಮೇಲೆ ತಮ್ಮ ನಿಯಂತ್ರಣ ಸಾಧಿಸುತ್ತಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಈ ರೀತಿ ಬಂದ ಹಣವನ್ನು ಅವರು ಐಷಾರಾಮಿ ವಾಹನಗಳನ್ನು ಖರೀದಿಸಲು ಬಳಸಿದ್ದಾರೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.