
ಪ್ರಜಾವಾಣಿ ವಾರ್ತೆ
ನವದೆಹಲಿ: ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ಆಮ್ಲಜನಕ ಸಿಲಿಂಡರ್ ಖಾಲಿಯಾಗಿ 24 ಜನರು ಮೃತಪಟ್ಟಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದುರಂತಕ್ಕೆ ಸಂಬಂಧಿಸಿದ ವರದಿಯೊಂದನ್ನು ಲಗತ್ತಿಸಿ ಟ್ವೀಟ್ ಮಾಡಿರುವ ಅವರು, ಇದು ಸಾವೋ ಅಥವಾ ಕೊಲೆಯೋ ಎಂದು ಪ್ರಶ್ನಿಸಿದ್ದಾರೆ.
ದುರಂತಕ್ಕೆ ಸಂತಾಪ ಸೂಚಿಸಿರುವ ಅವರು, ವ್ಯವಸ್ಥೆಯು ಎಚ್ಚೆತ್ತುಕೊಳ್ಳುವ ಮೊದಲು ಇನ್ನೆಷ್ಟು ಸಂಕಟ ಅನುಭವಿಸಬೇಕೋ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.