ADVERTISEMENT

ಉತ್ತರಾಖಂಡ: ಚಂಪಾವತ್‌ ಉಪಚುನಾವಣೆ, ಸಿಎಂ ಧಾಮಿಗೆ ಸತ್ವ ಪರೀಕ್ಷೆ

ಪಿಟಿಐ
Published 31 ಮೇ 2022, 3:07 IST
Last Updated 31 ಮೇ 2022, 3:07 IST
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ (ಪಿಟಿಐ ಚಿತ್ರ)
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ (ಪಿಟಿಐ ಚಿತ್ರ)   

ಡೆಹ್ರಾಡೂನ್: ಉತ್ತರಾಖಂಡದ ಚಂಪಾವತ್‌ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಮತದಾನ ಮಂಗಳವಾರ ಬೆಳಗ್ಗೆ ಆರಂಭಗೊಂಡಿದೆ. ಚುನಾವಣೆ ಕಣದಲ್ಲಿರುವ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರಿಗೆ ಸತ್ವ ಪರೀಕ್ಷೆ ಇದಾಗಿದೆ.

ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಪುಷ್ಕರ್‌ ಸಿಂಗ್‌ ಧಾಮಿ ಅವರು ಈ ಚುನಾವಣೆಯಲ್ಲಿ ಗೆಲ್ಲಬೇಕಿದೆ. ಫೆಬ್ರುವರಿಯಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಖತಿಮಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಧಾಮಿ ಅವರೇ ಪರಾಭವಗೊಂಡಿದ್ದರು. ಸೋತಿದ್ದರೂ, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಅವರು, ಆರು ತಿಂಗಳ ಒಳಗಾಗಿ ಶಾಸನಸಭೆಗೆ ಆಯ್ಕೆಯಾಗಬೇಕಿದೆ.

ಚಂಪಾವತ್‌ನ ಮಾಜಿ ಶಾಸಕ ಕೈಲಾಶ್‌ ಗೆಹ್‍‌ತೊರಿ ಅವರು ಕಳೆದ ತಿಂಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಧಾಮಿ ಅವರು ಸ್ಪರ್ಧಿಸಲು ಅವಕಾಶ ಕಲ್ಪಿಸಿದ್ದರು.

ADVERTISEMENT

ಧಾಮಿ ಅವರಿಗೆ ಕಾಂಗ್ರೆಸ್‌ನ ಅಭ್ಯರ್ಥಿ ನಿರ್ಮಲಾ ಗೆಹ್‌ತೊರ್ ಅವರು ಪ್ರಮುಖ ಪ್ರತಿಸ್ಪರ್ಧಿಯಾಗಿದ್ದಾರೆ. ಸಮಾಜವಾದಿ ಪಕ್ಷದ ಮನೋಜ್‌ ಕುಮಾರ್‌ ಭಟ್‌ ಮತ್ತು ಸ್ವತಂತ್ರ ಅಭ್ಯರ್ಥಿ ಹಿಮಾಂಶು ಗಡ್ಕೊಟಿ ಸ್ಪರ್ಧೆಯಲ್ಲಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿದಂತೆ ಹಲವು ಬಿಜೆಪಿ ಮುಖಂಡರು ಧಾಮಿ ಪರ ಪ್ರಚಾರ ನಡೆಸಿದ್ದಾರೆ.

ಚಂಪಾವತ್‌ ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು 96,213 ಮತದಾರರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.