ADVERTISEMENT

ಬಾಂಬ್‌ ಬೆದರಿಕೆ ಕರೆ: ಚಂಡೀಗಢ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಶೋಧ

ಪಿಟಿಐ
Published 24 ಜನವರಿ 2023, 10:51 IST
Last Updated 24 ಜನವರಿ 2023, 10:51 IST
.
.   

ಚಂಡೀಗಢ: ‘ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್‌ ಇಟ್ಟಿರುವ ಬಗ್ಗೆ ಬೆದರಿಕೆ ಕರೆ ಬಂದಿದ್ದರಿಂದ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ’ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

‘ಸೆಕ್ಟರ್‌ 43ರಲ್ಲಿ ಇರುವ ನ್ಯಾಯಾಲಯದ ಸಂಕೀರ್ಣದೊಳಗೆ ಬಾಂಬ್‌ ಇಟ್ಟಿರುವ ಕುರಿತು ಮಂಗಳವಾರ ಮಧ್ಯಾಹ್ನ ಕಂಟ್ರೋಲ್‌ ಕೊಠಡಿಗೆ ಮಾಹಿತಿ ಲಭಿಸಿತ್ತು. ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ’ ಎಂದು ಚಂಡೀಗಢ ಪೊಲೀಸ್‌ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ನ್ಯಾಯಮೂರ್ತಿಗಳು, ವಕೀಲರು ಸೇರಿದಂತೆ ಸಂಕೀರ್ಣದೊಳಗಿದ್ದ ಎಲ್ಲರನ್ನೂ ಆಚೆ ಕಳುಹಿಸಲಾಯಿತು. ಬಳಿಕ ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದವರು ಸ್ಥಳದಲ್ಲಿ ತಪಾಸಣೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ನ್ಯಾಯಾಲಯ ಸಂಕೀರ್ಣದ ಸುತ್ತಲೂ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.