ADVERTISEMENT

India Pakistan Tensions: ಚಂಡೀಗಢದಲ್ಲಿ ಪಟಾಕಿ ನಿಷೇಧ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಮೇ 2025, 10:34 IST
Last Updated 9 ಮೇ 2025, 10:34 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಚಂಡೀಗಢ: ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮದುವೆ, ಧಾರ್ಮಿಕ ಹಬ್ಬಗಳು ಹಾಗೂ ಇನ್ನಿತರ ಸಮಾರಂಭಗಳ ವೇಳೆ ಪಟಾಕಿ ಸಿಡಿಸುವುದನ್ನು ನಿಷೇಧಿಸಿ ಚಂಡೀಗಢ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶಿಸಿದ್ದಾರೆ.

ಈ ಸಂಬಂದ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 163 ರ ಅಡಿಯಲ್ಲಿ ಆದೇಶ ನೀಡಲಾಗಿದೆ.

ADVERTISEMENT

ಏಪ್ರಿಲ್‌ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರರ ದಾಳಿ ಮತ್ತು ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮದುವೆ, ಸಮಾರಂಭ ಮತ್ತು ಧಾರ್ಮಿಕ ಹಬ್ಬಗಳ ಸಮಯದಲ್ಲಿ ಸಾರ್ವಜನಿಕರು ವ್ಯಾಪಕವಾಗಿ ಪಟಾಕಿ ಸಿಡಿಸುವುದು ಸಾಮಾನ್ಯ. ಪ್ರಸ್ತುತ ಪರಿಸ್ಥಿತಿಯಲ್ಲಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ಶಬ್ದವು ಸಾರ್ವಜನಿಕರಲ್ಲಿ ಭಯವನ್ನು ಉಂಟುಮಾಡುತ್ತದೆ, ಇದು ಬಾಂಬ್, ಡ್ರೋನ್ ಮತ್ತು ಕ್ಷಿಪಣಿ ದಾಳಿ ಎಂದು ಜನ ಭಯ ಭೀತರಾಗುವ ಸಾಧ್ಯತೆಯಿದೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತದೆ.

ಆದ್ದರಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 163ರ ಅಡಿಯಲ್ಲಿ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ ಕೇಂದ್ರಾಡಳಿತ ಪ್ರದೇಶ ಚಂಡೀಗಢದ ವ್ಯಾಪ್ತಿಯಲ್ಲಿ ಮದುವೆ ಮತ್ತು ಧಾರ್ಮಿಕ ಹಬ್ಬಗಳು ಹಾಗೂ ಇನ್ನಿತರ ಆಚರಣೆಗಳ ವೇಳೆ ಸಾರ್ವಜನಿಕರು ಪಟಾಕಿಗಳು ಸೇರಿದಂತೆ ಯಾವುದೇ ರೀತಿಯ ಸ್ಫೋಟಕಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಶಾಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಆದೇಶವು 9‌.05.2025 ರಿಂದ 07.07.2025 ರವರೆಗೆ ಜಾರಿಯಲ್ಲಿರುತ್ತದೆ. ಆದೇಶದ ಉಲ್ಲಂಘನೆ ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 223 ಮತ್ತು ಕಾನೂನಿನ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಎಂದೂ ಅವರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.