ADVERTISEMENT

ಚಂಡೀಗಢ ವಿ.ವಿ ಪ್ರಕರಣ: ಸೇನಾ ಸಿಬ್ಬಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 15:30 IST
Last Updated 24 ಸೆಪ್ಟೆಂಬರ್ 2022, 15:30 IST

ಚಂಡೀಗಢ:ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ ವಿದ್ಯಾರ್ಥಿನಿಯೊಬ್ಬರು ಇತರೆ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರೀಕರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ ಪೊಲೀಸರು ಶನಿವಾರ ಯೋಧನೊಬ್ಬನನ್ನು ಬಂಧಿಸಿದ್ದಾರೆ.

ಅರುಣಾಚಲ ಪ್ರದೇಶದ ಸೆಲಾ ಪಾಸ್‌ನಲ್ಲಿ ಆರೋಪಿ ಸಂಜೀವ ಸಿಂಗ್‌ನನ್ನು ಬಂಧಿಸಲಾಗಿದ್ದು, ಮೊಹಾಲಿ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುವುದು ಎಂದು ಪಂಜಾಬ್ ಪೊಲೀಸ್‌ ಮಹಾನಿರ್ದೇಶಕ ಗೌರವ್‌ ಯಾದವ್ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ವಿದ್ಯಾರ್ಥಿನಿ ಸೇರಿದಂತೆ ಮೂರು ಮಂದಿಯನ್ನು ಬಂಧಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.