ADVERTISEMENT

ಪಂಜಾಬ್‌ ಚುನಾವಣೆ| ಚನ್ನಿ ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ: ರಾಹುಲ್‌ ಅಧಿಕೃತ ಘೋಷಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಫೆಬ್ರುವರಿ 2022, 12:11 IST
Last Updated 6 ಫೆಬ್ರುವರಿ 2022, 12:11 IST
   

ಲೂಧಿಯಾನ: 'ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಪಂಜಾಬ್‌ನ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿ' ಎಂದು ರಾಹುಲ್‌ ಗಾಂಧಿ ಅವರು ಭಾನುವಾರ ಘೋಷಣೆ ಮಾಡಿದ್ದಾರೆ.

ಲೂಧಿಯಾನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ರಾಹುಲ್‌ ಗಾಂಧಿ ಅವರು ಈ ವಿಷಯವನ್ನು ತಿಳಿಸಿದರು.

ರಾಹುಲ್‌ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸುತ್ತಲೇ, ಸಿಎಂ ಚನ್ನಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ಕೈ ಮೇಲೆತ್ತಿ ಒಗ್ಗಟ್ಟು ಪ್ರದರ್ಶಿಸಿದರು.

ADVERTISEMENT

ಪಂಜಾಬ್‌ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಸಿಎಂ ಚನ್ನಿ ಆಗ್ರಹಿಸುತ್ತಲೇ ಬಂದಿದ್ದರು. ಶುದ್ಧಹಸ್ತರು ಮುಖ್ಯಮಂತ್ರಿ ಅಭ್ಯರ್ಥಿಯಾಗಲಿ ಎಂದು ಸಿಧು ಮಾರ್ಮಿಕವಾಗಿ ಹೇಳಿದ್ದರು. ಅಲ್ಲದೆ, ಪಕ್ಷದ 60 ಶಾಸಕರು ಮುಖ್ಯಮಂತ್ರಿ ಯಾರಾಗಬೇಕು ಎಂದು ನಿರ್ಧರಿಸುತ್ತಾರೆ ಎಂದೂ ಸಿಧು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.