ಮರಿಗಳೊಂದಿಗೆ 'ಗಾಮಿನಿ' ಚೀತಾ
(ಚಿತ್ರ–@byadavbjp)
ಶಿಯೋಪುರ: ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿನ ಚೀತಾ 'ಗಾಮಿನಿ' ಮೂರು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಬುಧವಾರ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಚೀತಾ ಮರು-ಪರಿಚಯ ಯೋಜನೆ ಅದ್ಭುತವಾಗಿ ಯಶ ಕಾಣುತ್ತಿದೆ. ದಕ್ಷಿಣ ಆಫ್ರಿಕಾದಿಂದ ತಂದ ಗಾಮಿನಿ ಚೀತಾ ಎರಡನೇ ಬಾರಿಗೆ ತಾಯಿಯಾಗಿದ್ದು, ಮೂರು ಮರಿಗಳಿಗೆ ಜನ್ಮ ನೀಡಿದೆ ಎಂದು ಹೇಳಿದ್ದಾರೆ.
27 ಮರಿಗಳು ಸೇರಿದಂತೆ ಭಾರತದಲ್ಲಿ ಒಟ್ಟು ಚೀತಾಗಳ ಸಂಖ್ಯೆ 38ಕ್ಕೆ ಏರಿದೆ ಎಂದೂ ಯಾದವ್ ತಿಳಿಸಿದ್ದಾರೆ.
ಭಾರತದಲ್ಲಿ ನಶಿಸಿಹೋಗಿದ್ದ ಚೀತಾ ಸಂತತಿಯನ್ನು ಮತ್ತೆ ಅಭಿವೃದ್ಧಿಪಡಿಸಲು, ‘ಪ್ರಾಜೆಕ್ಟ್ ಚೀತಾ’ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ನಮಿಬೀಯಾದಿಂದ 5 ಹೆಣ್ಣು ಮತ್ತು 3 ಗಂಡು ಚೀತಾಗಳನ್ನು ತಂದು, ಕುನೊ ರಾಷ್ಟ್ರೀಯ ಉದ್ಯಾನಕ್ಕೆ 2022ರ ಸೆ.17ರಂದು ಬಿಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.