ADVERTISEMENT

ಸೌದಿ ದೊರೆ ಭಾರತಕ್ಕೆ ಉಡುಗೊರೆಯಾಗಿ ನೀಡಿದ್ದ ಚೀತಾ ಸಾವು

ಐಎಎನ್ಎಸ್
Published 26 ಮಾರ್ಚ್ 2023, 13:16 IST
Last Updated 26 ಮಾರ್ಚ್ 2023, 13:16 IST
ಅಬ್ದುಲ್ಲಾ
ಅಬ್ದುಲ್ಲಾ   

ಹೈದರಾಬಾದ್: ಸೌದಿ ಅರೇಬಿಯಾದ ದೊರೆ ಹೈದರಾಬಾದ್‌ನ ಜವಾಹರಲಾಲ್ ನೆಹರು ಮೃಗಾಲಯಕ್ಕೆ ನೀಡಿದ್ದ ‘ಅಬ್ದುಲ್ಲಾ’ ಎಂಬ ಗಂಡು ಚೀತಾ ಹೃದಯಾಘಾತದಿಂದ ಮೃತಪಟ್ಟಿರುವುದು ವರದಿಯಾಗಿದೆ.

15 ವರ್ಷದ ಈ ಚೀತಾ ಕೆಲ ದಿನಗಳಿಂದ ಕಾಯಿಲೆಯಿಂದ ಬಳಲುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಹೃದಯಾಘಾತವಾಗಿ ಮೃತಪಟ್ಟಿದೆ ಎಂದು ಐಎಎನ್‌ಎಸ್ ಸುದ್ದಿಸಂಸ್ಥೆ ತಿಳಿಸಿದೆ.

2013 ರಲ್ಲಿ ಸೌದಿ ದೊರೆ ಮೊಹಮ್ಮದ್ ಅಲ್ ಸೌದ್ ಅವರು ಭಾರತ ಭೇಟಿ ವೇಳೆ ಹಿಬಾ ಎಂಬ ಒಂದು ಹೆಣ್ಣು ಚೀತಾ ಹಾಗೂ ಅಬ್ದುಲ್ಲಾ ಎಂಬ ಒಂದು ಗಂಡು ಚೀತಾವನ್ನು ಸ್ನೇಹಾರ್ಥವಾಗಿ ಜವಾಹರಲಾಲ್ ನೆಹರು ಮೃಗಾಲಯಕ್ಕೆ ನೀಡಿದ್ದರು.

ADVERTISEMENT

2020 ರಲ್ಲಿ ಇದೇ ಮೃಗಾಲಯದಲ್ಲಿ ಹಿಬಾ ಚೀತಾ ಮೃತಪಟ್ಟಿತ್ತು.

ಕಳೆದ ವರ್ಷ ನಮಿಬಿಯಾದಿಂದ 8 ಚೀತಾ ಗಳನ್ನು ತಂದು ಭಾರತದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.