ADVERTISEMENT

ಭಾರತ ನೆಲದಲ್ಲಿ ಮೊದಲ ಬೇಟೆಯಾಡಿದ ಚೀತಾಗಳು

ಪಿಟಿಐ
Published 7 ನವೆಂಬರ್ 2022, 11:47 IST
Last Updated 7 ನವೆಂಬರ್ 2022, 11:47 IST
ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿ, ಕುನೋ ರಾಷ್ಟ್ರೀಯ ಉದ್ಯಾನದ ಅರಣ್ಯ ಪ್ರದೇಶಕ್ಕೆ ಬಿಡುಗಡೆಯಾದ ಎರಡು ಚೀತಾಗಳು. ಪಿಟಿಐ ಚಿತ್ರ
ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿ, ಕುನೋ ರಾಷ್ಟ್ರೀಯ ಉದ್ಯಾನದ ಅರಣ್ಯ ಪ್ರದೇಶಕ್ಕೆ ಬಿಡುಗಡೆಯಾದ ಎರಡು ಚೀತಾಗಳು. ಪಿಟಿಐ ಚಿತ್ರ   

ಶಿಯೋಪುರ್ (ಮಧ್ಯಪ್ರದೇಶ): ನಮೀಬಿಯಾದಿಂದ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾಗಿರುವ ಎರಡು ಗಂಡು ಚೀತಾಗಳು, ಭಾರತದ ನೆಲದಲ್ಲಿ ಮೊದಲ ಬೇಟೆಯಾಡಿವೆಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಸೆಪ್ಟೆಂಬರ್ ಮಧ್ಯಭಾಗದಲ್ಲಿ ನಮೀಬಿಯಾದಿಂದ ತಂದಿರುವ ಐದು ಹೆಣ್ಣು ಮತ್ತು ಮೂರು ಗಂಡು ಚೀತಾಗಳನ್ನು ಕ್ವಾರಂಟೈನ್ ಪ್ರದೇಶದಲ್ಲಿ ಇರಿಸಲಾಗಿದೆ. ಈ ಪೈಕಿ ಎರಡು ಗಂಡು ಚೀತಾಗಳನ್ನು ನವೆಂಬರ್‌ 5 ರಂದು ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿದೆ.

'ನಮೀಬಿಯಾದಿಂದ ಭಾರತಕ್ಕೆ ಸ್ಥಳಾಂತರಗೊಂಡ ಬಳಿಕ ಚೀತಾಗಳ ಮೊದಲ ಬೇಟೆ ಇದಾಗಿದೆ. ಅವು (ಚೀತಾಗಳು) ಕ್ವಾರಂಟೈನ್ ಪ್ರದೇಶದಿಂದಅರಣ್ಯಕ್ಕೆ ಬಿಡುಗಡೆಯಾದ 24 ಗಂಟೆಗಳಲ್ಲೇ ಬೇಟೆಯಾಡಿವೆ.ಭಾನುವಾರ ರಾತ್ರಿ ಇಲ್ಲವೇ ಸೋಮವಾರ ಬೆಳಗ್ಗೆ ಜಿಂಕೆಯನ್ನು ಕೊಂದಿವೆ'ಎಂದು ಅರಣ್ಯ ಸಂರಕ್ಷಣಾಧಿಕಾರಿ ಉತ್ತಮ ಕುಮಾರ್ ಶರ್ಮಾ ಹೇಳಿದ್ದಾರೆ.

ADVERTISEMENT

‘ಒಳ್ಳೆಯ ಸುದ್ದಿ. ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಎರಡು ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನದ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿದೆ.ಉಳಿದವುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು’ ಎಂದು ಪ್ರಧಾನಿ ನರೇಂದ್ರಮೋದಿ ಅವರು ಭಾನುವಾರ ಬೆಳಗ್ಗೆ ಟ್ವೀಟ್‌ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.