ಚೆನ್ನೈ(ತಮಿಳುನಾಡು): ಚೆನ್ನೈಯಲ್ಲಿ ಮಹಿಳೆ ಸೇರಿದಂತೆ ಮೂವರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಏಪ್ರಿಲ್ 21 ರಂದು ಇಬ್ಬರು ಪುರುಷರು ಸೇರಿದಂತೆ ಮೂವರಲ್ಲಿ ಸೋಂಕು ದೃಢಪಟ್ಟಿತ್ತು. ಆತಂಕಪಡುವ ಅಗತ್ಯವಿಲ್ಲ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಸುಮಾರು 32 ಜನರನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದೂ ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.