ADVERTISEMENT

ಚೆನ್ನೈ – ಮೈಸೂರು ನಡುವಿನ ‘ವಂದೇ ಭಾರತ್‌’ ರೈಲಿನ ಪ್ರಾಯೋಗಿಕ ಸಂಚಾರ ಆರಂಭ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ನವೆಂಬರ್ 2022, 1:47 IST
Last Updated 7 ನವೆಂಬರ್ 2022, 1:47 IST
ಚೆನ್ನೈನಿಂದ ಹೊರಟಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು
ಚೆನ್ನೈನಿಂದ ಹೊರಟಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು    

ಚೆನ್ನೈ:ಚೆನ್ನೈ-ಬೆಂಗಳೂರು ಹಾಗೂ ಮೈಸೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲು ಸೋಮವಾರ (ನ.7)ರ ಮುಂಜಾನೆ 5.50ರಲ್ಲಿ ಚೆನ್ನೈನ ಎಂ.ಜಿ ರಾಮಚಂದ್ರನ್‌ ಕೇಂದ್ರ ರೈಲು ನಿಲ್ದಾಣದಿಂದ ಪ್ರಯೋಗಿಕ ಸಂಚಾರ ಆರಂಭಿಸಿದೆ.

ಚೆನ್ನೈ-ಬೆಂಗಳೂರು-ಮೈಸೂರು ನಡುವಣ ವಂದೇ ಭಾರತ್ ಎಕ್ಸ್‌ಪ್ರೆಸ್ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಲಿದೆ. ಈ ಮಾರ್ಗದಲ್ಲಿ ಬಹುತೇಕ ನ. 10ರಂದು ರೈಲು ಅಧಿಕೃತವಾಗಿ ಸಂಚರಿಸಲಿದೆ ಎಂದು ತಿಳಿದು ಬಂದಿದೆ.

ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತೀಚೆಗಷ್ಟೇ ವಂದೇ ಭಾರತ್ ಎಕ್ಸ್‌ಪ್ರೆಸ್‌ಅನ್ನು ಭಾರತೀಯ ರೈಲ್ವೆ ಬಿಡುಗಡೆಗೊಳಿಸಿತ್ತು.

ADVERTISEMENT

ಕರ್ನಾಟಕದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ವಂದೇ ಭಾರತ್ 2.0 ರೈಲುಗಳು, 'ಕವಚ' ಎಂಬ ರೈಲು ಡಿಕ್ಕಿ ತಪ್ಪಿಸುವ ವ್ಯವಸ್ಥೆ (ಟಿಸಿಎಎಸ್) ಸೇರಿದಂತೆ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ರೈಲು ಕೇವಲ 52 ಸೆಕೆಂಡುಗಳಲ್ಲಿ ಗಂಟೆಗೆ 0ರಿಂದ 100 ಕಿ.ಮೀ. ವೇಗವನ್ನು ಪಡೆದುಕೊಳ್ಳಬಲ್ಲದು.

ಅಪಖ್ಯಾತಿ:ಹಸು, ಧನ, ಎಮ್ಮೆಗೆ ಗುದ್ದಿ ಹಾನಿಗೊಳ್ಳುವ ಮೂಲಕ ವಂದೇ ಭಾರತ್‌ ರೈಲು ಅಪಖ್ಯಾತಿಗೂ ಒಳಗಾಗಿದೆ. ಮುಂಬೈ ಮತ್ತು ಗಾಂಧಿನಗರ ನಡುವಿನ ರೈಲು ಒಂದೇ ತಿಂಗಳಲ್ಲಿ ಮೂರು ಬಾರಿ ಇಂಥ ಘಟನೆಗೆ ಸಾಕ್ಷಿಯಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.