ADVERTISEMENT

ಛತ್ತೀಸ್‌ಗಡ: ನಕ್ಸಲ್ ಪೀಡಿತ ಪ್ರದೇಶದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು

ಪಿಟಿಐ
Published 17 ಡಿಸೆಂಬರ್ 2021, 8:21 IST
Last Updated 17 ಡಿಸೆಂಬರ್ 2021, 8:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದಂತೇವಾಡಾ: ಛತ್ತೀಸ್‌ಗಡದಲ್ಲಿ ನಕ್ಸಲ್ ಪೀಡಿತ ದಂತೇವಾಡಾ ಜಿಲ್ಲೆಯಲ್ಲಿ ಕಬ್ಬಿಣದ ಅದಿರು ತುಂಬಿದ್ದ ಗೂಡ್ಸ್ ರೈಲಿನ 17 ಬೋಗಿಗಳು ಹಳಿ ತಪ್ಪಿದ್ದು, ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸ್ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಕಿರಾಂದುಲ್-ವಿಶಾಖಪಟ್ಟಣ ರೈಲ್ವೆ ವಿಭಾಗದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ.

ಕಬ್ಬಿಣದ ಅದಿರು ತುಂಬಿದ ರೈಲು ಕಿರಾಂದುಲ್ (ದಂತೇವಾಡಾ)ದಿಂದ ವಿಶಾಖಪಟ್ಟಣಕ್ಕೆಚಲಿಸುತ್ತಿದ್ದಾಗ ಭನ್ಸ್ ಮತ್ತು ಕಮಲೂರ್ ನಿಲ್ದಾಣಗಳ ನಡುವೆ ಮುಂಜಾನೆ 4.05ರ ವೇಳೆಗೆ ಘಟನೆ ನಡೆದಿದೆ ಎಂದು ದಂತೇವಾಡಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.

ADVERTISEMENT

ರೈಲು ಹಳ್ಳಿ ತಪ್ಪಿದ ಪರಿಣಾಮ ಜಗದಲಪುರ ಮತ್ತು ಕಿರಾಂದುಲ್ ನಡುವೆ ರೈಲುಗಳ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಅವರು ಹೇಳಿದರು.

ಏತನ್ಮಧ್ಯೆ ಮಾವೋವಾದಿಗಳ ಕೈವಾಡ ಸಾಧ್ಯತೆಯನ್ನು ತಳ್ಳಿ ಹಾಕಿದ್ದಾರೆ. ಅಲ್ಲದೆ ಪ್ರಾಥಮಿಕ ತನಿಖೆಯಲ್ಲಿ ಯಾಂತ್ರಿಕ ದೋಷಗಳಿಂದಾಗಿ ಘಟನೆ ಸಂಭವಿಸಿರಬಹುದು ಎಂದುವಿವರಣೆ ನೀಡಿದ್ದಾರೆ.

ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಹಾಗೂ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸ್ಥಳಕ್ಕೆ ಭೇಟಿ ನೀಡಿದ್ದು, ರೈಲು ಹಳಿ ದುರಸ್ತಿಗೊಳಿಸುವ ಕಾಮಗಾರಿ ಪ್ರಗತಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.