ADVERTISEMENT

ಛತ್ತೀಸಗಢ | ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸಿಎಎಫ್ ಯೋಧ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2024, 3:16 IST
Last Updated 30 ಡಿಸೆಂಬರ್ 2024, 3:16 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ರಾಯಪುರ: ಛತ್ತೀಸಗಢದ ಸಶಸ್ತ್ರ ಪಡೆಯ (ಸಿಎಎಫ್) ಯೋಧಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ,

ಮೃತರನ್ನು ಸಿಎಎಫ್‌ನ 14ನೇ ಬೆಟಾಲಿಯನ್‌ಗೆ ಸೇರಿದ ಅನಿಲ್ ಸಿಂಗ್ ಗಹರ್ವಾರ್ ಎಂದು ಗುರುತಿಸಲಾಗಿದೆ.

ADVERTISEMENT

ಇಲ್ಲಿನ ರಾಖಿ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸ್ ಹೆಡ್‌ಕ್ವಾರ್ಟರ್‌ನಲ್ಲಿ ಅನಿಲ್ ತಮ್ಮ ಸರ್ವೀಸ್‌ ರೈಫಲ್‌ನಿಂದಲೇ ಗುಂಡು ಹಾರಿಸಿಕೊಂಡು ಭಾನುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಂಡಿನ ಸದ್ದು ಕೇಳಿ ಆತನ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಅಷ್ಟರ ಹೊತ್ತಿಗೆ ಅನಿಲ್‌ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

ಈ ಘಟನೆ ಕುರಿತು ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ಆತನ ಸಾವಿಗೆ ನಿಖರವಾದ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.