ADVERTISEMENT

ಛತ್ತೀಸಗಢದಲ್ಲಿ ಐಇಡಿ ಸ್ಫೋಟ; ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ

ಪಿಟಿಐ
Published 14 ಜನವರಿ 2023, 6:28 IST
Last Updated 14 ಜನವರಿ 2023, 6:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಶಂಕಿತ ನಕ್ಸಲರು ನಡೆಸಿದ ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸ್ಫೋಟದಲ್ಲಿ ಗಾಯಗೊಂಡ ಎಎಸ್‌ಐ ಮುಹಮ್ಮದ್ ಅಸ್ಲಾಮ್ ಅವರನ್ನು ಬಾಸಾಗುಡಾದಲ್ಲಿರುವ ಸಿಆರ್‌ಪಿಎಫ್‌ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅವರ ಆರೋಗ್ಯ ಸ್ಥಿರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ರಾಯಪುರಕ್ಕೆ ಏರ್‌ಲಿಫ್ಟ್ ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ತಾರ್ರೆಮ್ ಪೊಲೀಸ್ ಠಾಣಾ ವ್ಯಾಪ್ತಿಯ ಪೆಡಾಪಲ್ಲಿ ಗ್ರಾಮದಲ್ಲಿ ಬೆಳಿಗ್ಗೆ 8.45ರ ಸುಮಾರಿಗೆ ಘಟನೆ ನಡೆದಿದೆ.

ಸಿಆರ್‌ಪಿಎಫ್‌ನ 153ನೇ ಬೆಟಾಲಿಯನ್ ತಂಡವು ಗಸ್ತು ತಿರುಗುತ್ತಿದ್ದಾಗ ಐಇಡಿ ಸ್ಫೋಟಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.