ಚಿತ್ರ ಕೃಪೆ: ಪ್ರಾತಿನಿಧಿಕ ಚಿತ್ರ
ಬಲರಾಂಪುರ: ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯಲ್ಲಿ ಅಣೆಕಟ್ಟಿನ ಒಂದು ಭಾಗ ಕುಸಿದ ಪರಿಣಾಮ ಪ್ರವಾಹ ಉಂಟಾಗಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಧನೇಶ್‌ಪುರ ಗ್ರಾಮದ ಲೂಟಿ ಜಲಾಶಯದ ಒಂದು ಭಾಗ ಕುಸಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
1980 ರ ದಶಕದ ಆರಂಭದಲ್ಲಿ ಲೂಟಿ ಜಲಾಶಯವನ್ನು ನಿರ್ಮಿಸಲಾಗಿತ್ತು. ಸ್ಥಳೀಯರು ಈ ನೀರನ್ನು ಕೃಷಿಗಾಗಿ ಬಳಸುತ್ತಿದ್ದರು.
ಜಲಾಶಯ ಕುಸಿತದಿಂದ ಹತ್ತಿರವಿದ್ದ ಮನೆಗಳು ಕೊಚ್ಚಿಹೋಗಿವೆ. ಪ್ರವಾಹದಲ್ಲಿ ನಾಲ್ವರು ಮೃತ ಪಟ್ಟಿದ್ದಾರೆ. ಮೂವರು ನಾಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಭದ್ರತಾ ಪಡೆ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.