ADVERTISEMENT

Chhattisgarh Encounter: ಇಬ್ಬರು ನಕ್ಸಲರು ಹತ; ಯೋಧ ಹುತಾತ್ಮ

ಪಿಟಿಐ
Published 20 ಮಾರ್ಚ್ 2025, 6:57 IST
Last Updated 20 ಮಾರ್ಚ್ 2025, 6:57 IST
<div class="paragraphs"><p>ಗುಂಡಿನ ಕಾಳಗ</p></div>

ಗುಂಡಿನ ಕಾಳಗ

   

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ನಕ್ಸಲರು ಮತ್ತು ಭದ್ರತಾ ಪಡೆಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರನ್ನು ಹತ್ಯೆ ಮಾಡಲಾಗಿದ್ದು ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಬಿಜಾಪುರ ಮತ್ತು ದಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಗುರುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು. ಭದ್ರತಾ ಪಡೆ ಯೋಧರು ಹಾಗೂ ಜಿಲ್ಲಾ ಪೊಲೀಸ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

ADVERTISEMENT

ಘಟನೆಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಹಾಗೂ ಭದ್ರತಾ ಪಡೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಿಂದ ಶಸ್ತ್ರಾಸ್ತ್ರಗಳು, ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.