ಭದ್ರತಾ ಪಡೆ
ನಾರಾಯಣಪುರ: ಛತ್ತೀಸಗಢದ ನಾರಾಯಣಪುರ ಜಿಲ್ಲಿಯಲ್ಲಿ ಭದ್ರತಾ ಪಡೆ ಹಾಗೂ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳಾ ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಇಂದು (ಗುರುವಾರ) ತಿಳಿಸಿದ್ದಾರೆ.
ಅಭುಜ್‌ಮಾದ್ ಪ್ರದೇಶದ ಕೊಹ್ಕಮೆಟಾ ಪೊಲೀಸ್ ಠಾಣೆಯ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ.
ನಕ್ಸಲರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಜಂಟಿಯಾಗಿ ಕಾರ್ಯಾಚರಣೆ ನಡೆಸಿತು.
ನಾರಾಯಣಪುರ ಹಾಗೂ ಕೊಂಡಗಾಂವ್ ಜಿಲ್ಲೆಗಳ ಡಿಆರ್‌ಜಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಇಲ್ಲಿಯವರೆಗೆ ಇಬ್ಬರು ಮಹಿಳಾ ನಕ್ಸಲರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ಸಾಸ್ ಹಾಗೂ .315 ಬೋರ್ ರೈಫಲ್ ಸಹ ವಶಪಡಿಸಿಕೊಳಲಾಗಿದೆ.
ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.