ADVERTISEMENT

ಗಣೇಶ ವಿಸರ್ಜನೆ ಮೆರವಣಿಗೆ ಹೊರಟಿದ್ದವರ ಮೇಲೆ ಹರಿದ SUV: 3 ಸಾವು, 22 ಮಂದಿ ಗಾಯ

ಪಿಟಿಐ
Published 3 ಸೆಪ್ಟೆಂಬರ್ 2025, 7:02 IST
Last Updated 3 ಸೆಪ್ಟೆಂಬರ್ 2025, 7:02 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಎ.ಐ ಚಿತ್ರ

ಜಶ್‌ಪುರ: ಗಣೇಶ ವಿಸರ್ಜನೆ ಮೆರವಣಿಗೆ ಹೊರಟಿದ್ದ ಗುಂಪಿನ ಮೇಲೆ ಪಾನಮತ್ತ ವ್ಯಕ್ತಿ ಚಲಾಯಿಸುತ್ತಿದ್ದ ಎಸ್‌ಯುವಿ ಹರಿದ ಪರಿಣಾಮ 3 ಮಂದಿ ಸಾವಿಗೀಡಾಗಿ 22 ಮಂದಿ ಗಾಯಗೊಂಡ ಘಟನೆ ಛತ್ತೀಸಗಢದ ಜಶ್‌ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ADVERTISEMENT

ಮಂಗಳವಾರ ರಾತ್ರಿ ಗಣೇಶ ಮೂರ್ತಿಯ ವಿಸರ್ಜನೆಗೆ ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ ಬಗೀಚಾ ಪೊಲೀಸ್ ಠಾಣಾ ವ್ಯಾಪ್ತಿಯ ಜುರುದಂದ್ ಗ್ರಾಮದಲ್ಲಿ ಪ್ರಕರಣ ಘಟಿಸಿದೆ ಎಂದು ಜಶ್‌ಪುರದ ಪೊಲೀಸ್ ವರಿಷ್ಠಾಧಿಕಾರಿ ಶಶಿಮೋಹನ್ ಸಿಂಗ್ ಹೇಳಿದ್ದಾರೆ.

ಬಗೀಚಾ ಜಶ್‌ಪುರ ರಸ್ತೆಯಲ್ಲಿ ಎಸ್‌ಯುವಿ ಬಂದು ಡಿಕ್ಕಿ ಹೊಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ವಿಪಿನ್ ಪ್ರಜಾ‍ಪತಿ (17), ಅರವಿಂದ ಕೇರ್‌ಕೆಟ್ಟಾ (19) ಹಾಗೂ ಖಿರೋವತಿ ಯಾದವ್ (32) ಸ್ಥಳದಲ್ಲೇ ಮೃತಟ್ಟಿದ್ದಾರೆ. 22 ಮಂದಿ ಗಾಯಗೊಂಡಿದ್ದು, ಈ ಪೈಕಿ ಕೆಲವರು ಗಂಭೀರವಾಗಿ ಗಾಯಾಳುಗಳಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಪಕ್ಕದ ಸುರ್ಗುಜಾ ಜಿಲ್ಲೆಯ ಅಂಬಿಕಾಪುರ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ. ಉಳಿದವನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸೇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯ ವೇಳೆ ಎಸ್‌ಯುವಿ ಚಾಲಕ ಸುಖ್‌ಸಾಗರ್ ವೈಷ್ಣವ್ (40) ಪಾನಮತ್ತನಾಗಿದ್ದ. ಆತನನ್ನು ಬಂಧಿಸಿ, ಗಾಡಿಯನ್ನು ದಸ್ತಗಿರಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.