
ಕೊರ್ಬಾ (ಛತ್ತೀಸಗಢ): ಛತ್ತಿಸಗಢದ ಕೊರ್ಬಾ ಜಿಲ್ಲೆಯಲ್ಲಿ ಪೊಲೀಸರ ತುರ್ತು ಸೇವಾ ವಾಹನದ ಚಾಲಕ ಸೇರಿದಂತೆ ಐವರು ದುಷ್ಕರ್ಮಿಗಳು 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ.
ಬಂಕಿಮೊಂಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿ 8ರ ರಾತ್ರಿ ಘಟನೆ ನಡೆದಿದೆ. ‘ಡಯಲ್ 112’ ಪೊಲೀಸ್ ಸಹಾಯವಾಣಿ ವಾಹನದ ಚಾಲಕ ಸೇರಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಲ್ಲಿ ಒಬ್ಬ ವ್ಯಕ್ತಿ ಸಂತ್ರಸ್ತೆಗೆ ಪರಿಚಿತನಾಗಿದ್ದು, ಆತ ಯುವತಿಯನ್ನು ನಿರ್ಜನ ಮನೆಯೊಂದಕ್ಕೆ ಕರೆದೊಯ್ದಿದ್ದನು. ಅಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಲಾಗಿತ್ತು.
ಘಟನೆಯ ನಂತರ ಆರೋಪಿಗಳು ಯುವತಿಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿಟ್ಟು ಪರಾರಿಯಾಗಿದ್ದರು. ಮನೆ ತಲುಪಿದ್ದ ಯುವತಿ ಘಟನೆಯನ್ನು ಕುಟುಂಬದವರಿಗೆ ತಿಳಿಸಿದ್ದು, ಅವರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿ, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.