ADVERTISEMENT

ಛತ್ತೀಸಗಢ | ಕಲುಷಿತ ಆಹಾರ ಸೇವನೆ; ಬಾಲಕಿ ಸಾವು, 15 ಮಂದಿ ಅಸ್ವಸ್ಥ

ಪಿಟಿಐ
Published 15 ಫೆಬ್ರುವರಿ 2025, 6:22 IST
Last Updated 15 ಫೆಬ್ರುವರಿ 2025, 6:22 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಐಸ್ಟೋಕ್‌ ಚಿತ್ರ

ಕೊಂಡಗಾಂವ್: ಛತ್ತೀಸಗಢದ ಕೊಂಡಗಾಂವ್‌ ಜಿಲ್ಲೆಯಲ್ಲಿ ಕಲುಷಿತ ಆಹಾರ ಸೇವಿಸಿ 9 ವರ್ಷದ ಬಾಲಕಿ ಮೃತಪಟ್ಟಿದ್ದು, 15 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಮರ್ದಪಾಲ್‌ ಪ್ರದೇಶದ ಹಂಗ್ವಾ ಗ್ರಾಮದಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಚಿಕನ್‌ ಮತ್ತು ಪನೀರ್‌ನಿಂದ ತಯಾರಿಸಲಾಗಿದ್ದ ಆಹಾರವನ್ನು ಸೇವಿಸಿದ ಬಳಿಕ ಹಲವು ಜನರಲ್ಲಿ ವಾಂತಿ, ಭೇದಿ ಸಮಸ್ಯೆಗಳು ಕಾಣಿಸಿಕೊಂಡಿವೆ. ತಕ್ಷಣ ಗ್ರಾಮಕ್ಕೆ ಆರೋಗ್ಯ ತಂಡವನ್ನು ಕಳುಹಿಸಲಾಯಿತು. ಅಸ್ವಸ್ಥರನ್ನು ಕೊಂಡಗಾಂವ್‌ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆ ಬಾಲಕಿ ಮೃತಪಟ್ಟಿದ್ದಾಳೆ. ಇತರ 15 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೊಂಡಗಾಂವ್ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಆರ್.ಕೆ. ಸಿಂಗ್ ಹೇಳಿದ್ದಾರೆ.

ಕಲುಷಿತ ಆಹಾರ ಸೇವನೆಯಿಂದ ಹೀಗಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸಮಾರಂಭ ನಡೆದ ಮನೆಯಿಂದ ಪನೀರ್‌ ಮತ್ತು ಚಿಕನ್‌ ಆಹಾರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಗ್ರಾಮಸ್ಥರನ್ನು ಪರೀಕ್ಷಿಸಲು ಆರೋಗ್ಯ ಶಿಬಿರವನ್ನು ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆ ಕುರಿತು ಮುಖ್ಯಮಂತ್ರಿ ವಿಷ್ಣು ದೇವ್‌ ಸಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಗೆ ದಾಖಲಾದವರು ಆರೋಗ್ಯ ಸ್ಥಿತಿಯನ್ನು ತಿಳಿದುಕೊಳ್ಳಲು ಸಚಿವ ಕೇದಾರ್‌ ಕಶ್ಯಪ್‌ ಅವರು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಚಿಕಿತ್ಸೆಗೆ ಉತ್ತಮ ವ್ಯವಸ್ಥೆಗಳನ್ನು ಮಾಡುವಂತೆ ಅಧಿಕಾರಿಗಳು ಮತ್ತು ವೈದ್ಯರಿಗೆ ನಿರ್ದೇಶನ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.