ADVERTISEMENT

ಛತ್ತೀಸಗಡ: 7 ಗಂಟೆಯಲ್ಲಿ 101 ಮಹಿಳೆಯರಿಗೆ ಶಸ್ತ್ರಚಿಕಿತ್ಸೆ- ತನಿಖೆಗೆ ಆದೇಶ

ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಶಿಬಿರ

ಪಿಟಿಐ
Published 4 ಸೆಪ್ಟೆಂಬರ್ 2021, 11:34 IST
Last Updated 4 ಸೆಪ್ಟೆಂಬರ್ 2021, 11:34 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರಾಯಪುರ, ಛತ್ತೀಸಗಡ: ಸುರ್ಗುಜಾ ಜಿಲ್ಲೆಯಲ್ಲಿ ಇತ್ತೀಚೆಗೆ ಸರ್ಕಾರ ಆಯೋಜಿಸಿದ್ದ ಆರೋಗ್ಯ ಶಿಬಿರದಲ್ಲಿ ಶಸ್ತ್ರಚಿಕಿತ್ಸಕರೊಬ್ಬರು ಏಳು ಗಂಟೆಯಲ್ಲಿ 101 ಮಹಿಳೆಯರಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ ಎಂಬ ಆರೋಪಗಳ ಕುರಿತು ತನಿಖೆ ನಡೆಸಲು ಛತ್ತೀಸ್‌ಗಡ ಸರ್ಕಾರ ಶನಿವಾರ ಆದೇಶಿಸಿದೆ.

ರಾಜಧಾನಿ ರಾಯಪುರದಿಂದ 300 ಕಿ.ಮೀ ದೂರವಿರುವ, ಸುರ್ಗುಜಾ ಜಿಲ್ಲೆಯ ಮೈನಪಾಟ ಮಂಡಲ ವ್ಯಾಪ್ತಿಯ ನರ್ಮದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್‌ 27ರಂದು ಈ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಶಿಬಿರವನ್ನು ಆಯೋಜಿಸಲಾಗಿತ್ತು.

ಶಿಬಿರದಲ್ಲಿ ಅಕ್ರಮಗಳು ನಡೆದಿವೆ ಎಂಬುದಾಗಿಸ್ಥಳೀಯ ಪತ್ರಿಕೆಗಳಲ್ಲಿ ವರದಿಗಳು ಪ್ರಕಟವಾಗಿದ್ವವು. ಈ ವರದಿಗಳನ್ನು ಆಧರಿಸಿ ಸರ್ಕಾರ ತನಿಖೆಗೆ ಆದೇಶಿಸಿದೆ.

ADVERTISEMENT

ಈ ಶಿಬಿರದಲ್ಲಿ ಒಟ್ಟು 101 ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಲಾಗಿದೆ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಒಬ್ಬ ಶಸ್ತ್ರಚಿಕಿತ್ಸಕ ಒಂದು ದಿನದಲ್ಲಿ ಗರಿಷ್ಠ 30 ಶಸ್ತ್ರಚಿಕಿತ್ಸಗಳನ್ನು ನೆರವೇರಿಸಬಹುದು. ಹೀಗಾಗಿ, ಈ ಪ್ರಕರಣದಲ್ಲಿ ಮಾರ್ಗಸೂಚಿಗಳನ್ನು ಏಕೆ ಉಲ್ಲಂಘಿಸಲಾಗಿದೆ ಎಂಬುದನ್ನು ಪತ್ತೆ ಹಚ್ಚಲು ತನಿಖೆಗೆ ಆದೇಶಿಸಲಾಗಿದೆ‘ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ ಅಲೋಕ್ ಶುಕ್ಲಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.