ADVERTISEMENT

ಛತ್ತೀಸಗಢ: ಭದ್ರತಾ ಪಡೆಗಳು–ನಕ್ಸಲರ ನಡುವೆ ಗುಂಡಿನ ಚಕಮಕಿ

ಪಿಟಿಐ
Published 12 ಡಿಸೆಂಬರ್ 2024, 6:54 IST
Last Updated 12 ಡಿಸೆಂಬರ್ 2024, 6:54 IST
<div class="paragraphs"><p> ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನಾರಾಯಣಪುರ (ಛತ್ತೀಸಗಢ): ಗುರುವಾರ ಮುಂಜಾನೆ ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ಮಧ್ಯ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಪಡೆಗಳು ಹಾಗೂ ನಕ್ಸಲ್ ನಿಗ್ರಹ ದಳ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ದಕ್ಷಿಣ ಅಬುಜ್‌ಮಾದ್‌ನ ಕಾಡಿನಲ್ಲಿ ಮುಂಜಾನೆ 3 ಗಂಟೆಗೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿಸಿದ್ದಾರೆ.

ADVERTISEMENT

ನಾರಾಯಣಪುರ, ದಾಂತೇವಾಡ, ಬಾಸ್ತರ್ ಹಾಗೂ ಕೊಂಡಗಾವ್‌ನ ಜಿಲ್ಲಾ ಮೀಸಲು ಪಡೆಗಳು ಹಾಗೂ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಗಳು ಕಾರ್ಯಾಚರಣೆ ನಡೆಸಿವೆ.

ಗುಂಡಿನ ಕಾಳಗ ಜಾರಿಯಲ್ಲಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.