ADVERTISEMENT

ಛತ್ತೀಸಗಢ, ಮಧ್ಯ ಪ್ರದೇಶ ಮುಖ್ಯಮಂತ್ರಿಗಳ ಪ್ರಮಾಣ ಇಂದು

ಪಿಟಿಐ
Published 13 ಡಿಸೆಂಬರ್ 2023, 3:32 IST
Last Updated 13 ಡಿಸೆಂಬರ್ 2023, 3:32 IST
<div class="paragraphs"><p>ವಿಷ್ಣುದೇವ್‌ ಸಾಯ್‌</p></div>

ವಿಷ್ಣುದೇವ್‌ ಸಾಯ್‌

   

ರಾ‍ಯಪುರ/ ಭೋಪಾಲ್:  ಛತ್ತೀಸಗಢದ ನೂತನ ಮುಖ್ಯಮಂತ್ರಿ ವಿಷ್ಣುದೇವ್‌ ಸಾಯ್‌ ಅವರ ಪ್ರಮಾಣ ವಚನ ಸ್ವೀಕಾರವು ಐತಿಹಾಸಿಕ ಸಮಾರಂಭ ಆಗಿರಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅರುಣ್‌ ಸಾವ್‌ ಹೇಳಿದ್ದಾರೆ.

ಬುಧವಾರ ಮಧ್ಯಾಹ್ನ 2 ಗಂಟೆಗೆ ರಾಯಪುರದ ವಿಜ್ಞಾನ ಕಾಲೇಜಿನ ಮೈದಾನದಲ್ಲಿ  ನಡೆಯಲಿರುವ ಕಾರ್ಯಕ್ರಮದಲ್ಲಿ 50,000ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ.

ADVERTISEMENT

ಮೋಹನ್‌ ಯಾದವ್‌ ಇಂದು ಪ್ರಮಾಣ: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದು ಇದಕ್ಕಾಗಿ ವ್ಯಾಪಕ ಸಿದ್ಧತೆ ಮಾಡಲಾಗಿದೆ.

ಭೋಪಾಲ್‌ನ ಲಾಲ್‌ ಪರೇಡ್‌ ಮೈದಾನದಲ್ಲಿ ಸಮಾರಂಭ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.