ADVERTISEMENT

ತನ್ನ ಜನ್ಮದಿನದ ವೇಳೆ ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ಮಸಣ ಸೇರಿದ ಯುವಕ!

ಪಿಟಿಐ
Published 23 ಆಗಸ್ಟ್ 2021, 9:20 IST
Last Updated 23 ಆಗಸ್ಟ್ 2021, 9:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದುರ್ಗ್: ಜನ್ಮದಿನ ಆಚರಣೆ ಮಾಡಿಕೊಳ್ಳುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಗನ್‌ನಿಂದ ಗುಂಡು ಸಿಡಿದು ಯುವಕನೊಬ್ಬ ಮೃತಪಟ್ಟ ಘಟನೆ ಚತ್ತೀಸ್‌ಗಢದ ದು‌ರ್ಗ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮೃತಪಟ್ಟವನನ್ನು ಜವಾಹರ್‌ ನಗರದ ರೋಹನ್ ಸಿಂಗ್ (18) ಎಂದು ಗುರುತಿಸಲಾಗಿದೆ.

ರೋಹನ್ ಸಿಂಗ್ ತನ್ನ ಕುಟುಂಬದವರು ಹಾಗೂ ಸ್ನೇಹಿತರ ಜೊತೆ 18 ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದರು. ಈ ವೇಳೆ ತನ್ನ ತಂದೆಯ ಗನ್ ತೆಗೆದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸುವಾಗಆಕಸ್ಮಿಕವಾಗಿ ಗುಂಡು ಸಿಡಿದಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ವೇಳೆ ರೋಹನ್ ಸಿಂಗ್ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ರೋಹನ್ ಸಿಂಗ್ ತಂದೆ ಸೆಕ್ಯೂರಿಟಿ ಗಾರ್ಡ್‌ ಆಗಿದ್ದರು. ಅವರ ಬಳಿ 12 ಬೋರ್ ಗನ್‌ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ದುರ್ಗ್ಜಿಲ್ಲೆಯ ವೈಶಾಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.