ADVERTISEMENT

ಛತ್ತೀಸ್‌ಗಢ: ಟ್ರಕ್ –ವ್ಯಾನ್ ನಡುವೆ ಡಿಕ್ಕಿ, 11 ಮಂದಿ ಸ್ಥಳದಲ್ಲೇ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಫೆಬ್ರುವರಿ 2023, 2:47 IST
Last Updated 24 ಫೆಬ್ರುವರಿ 2023, 2:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಯ್‌ಪುರ: ಬಲೋಡಾ ಬಜಾರ್ - ಭಟಪರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ಟ್ರಕ್‌ ಹಾಗೂ ವ್ಯಾನ್‌ ನಡುವೆ ಡಿಕ್ಕಿ ಸಂಭವಿಸಿದ್ದು, 11 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಪ್ರಯಾಣಿಕರೆಲ್ಲರೂ ಸಂಬಂಧಿಕರಾಗಿದ್ದು, ಗುರುವಾರ ತಡರಾತ್ರಿ ಕೌಟುಂಬಿಕ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.