
ಪಿಟಿಐ
ಸುಕ್ಮಾ (ಛತ್ತೀಸಗಢ): ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಭಾನುವಾರ ಸ್ಫೋಟಗೊಂಡು, ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸೈನಿಕರೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿ ತೊಡಗಿದ್ದ ವೇಳೆ ಈ ಘಟನೆ ನಡೆದಿದೆ. ಸೈನಿಕನ ಕಾಲಿಗೆ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ರಾಯಪುರಕ್ಕೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಸ್ತು ತಿರುಗುತ್ತಿದ್ದ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಉಗ್ರರು ಕಚ್ಚಾ ಬಾಂಬ್‌ಗಳನ್ನು ಹುದುಗಿಸಿಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.