ADVERTISEMENT

ಛತ್ತೀಸಗಢ: ಇಬ್ಬರು ನಕ್ಸಲರ ಹತ್ಯೆ

ಪಿಟಿಐ
Published 12 ಸೆಪ್ಟೆಂಬರ್ 2025, 13:18 IST
Last Updated 12 ಸೆಪ್ಟೆಂಬರ್ 2025, 13:18 IST
   

ಬಿಜಾಪುರ(ಛತ್ತೀಸಗಢ): ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಮೃತಪಟ್ಟಿದ್ದಾರೆ. 

ಭದ್ರತಾ ಸಿಬ್ಬಂದಿ ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಈ ಎನ್‌ಕೌಂಟರ್‌ ನಡೆದಿದೆ. ನಕ್ಸಲರ ಮೃತದೇಹಗಳು, ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಘಟನಾ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಪಿಐ (ಮಾವೋವಾದಿ) ಸದಸ್ಯ ಮೋಡೆಂ ಬಾಲಕೃಷ್ಣ ಸೇರಿದಂತೆ 10 ಜನರ ನಕ್ಸಲರನ್ನು ಗರಿಯಾಬಂದ್ ಜಿಲ್ಲೆಯಲ್ಲಿ ಗುರುವಾರ ಎನ್‌ಕೌಂಟರ್‌ ಮಾಡಲಾಗಿತ್ತು. ಬಾಲಕೃಷ್ಣನ ಸುಳಿವು ನೀಡಿದವರಿಗೆ ₹1 ಕೋಟಿ ಬಹುಮಾನ ಘೋಷಿಸಲಾಗಿತ್ತು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.