ರಾಯಪುರ: ಛತ್ತೀಸಗಢದ ನಾರಾಯಣಪುರ ಮತ್ತು ದಂತೇವಾಡ ಜಿಲ್ಲೆಯ ಗಡಿಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಯೊಂದಿಗೆ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್ ಮೃತಪಟ್ಟಿದ್ದಾನೆ.
ನಾರಾಯಣಪುರ ಮತ್ತು ದಂತೇವಾಡ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ರಾಜ್ಯ ಪೊಲೀಸ್ ಪಡೆಯ ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಜಂಟಿ ತಂಡವು ಅಂತರ ಗಡಿ ಜಿಲ್ಲಾ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುವಾಗ ಈ ಎನ್‌ಕೌಂಟರ್ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನಾಸ್ಥಳದಲ್ಲಿ ಒಬ್ಬ ನಕ್ಸಲ್‌ನ ಮೃತದೇಹ ಪತ್ತೆಯಾಗಿದೆ ಮತ್ತು ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.