ADVERTISEMENT

ಛತ್ತೀಸಗಡ: ಎನ್‌ಕೌಂಟರ್‌ನಲ್ಲಿ ನಕ್ಸಲ್‌ ಹತ್ಯೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2022, 15:32 IST
Last Updated 22 ಜುಲೈ 2022, 15:32 IST
   

ಸುಕ್ಮಾ: ಛತ್ತೀಸಗಡದ ಸುಕ್ಮಾ ಜಿಲ್ಲೆಯ ಅರಣ್ಯದಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್‌ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಕ್ಮಾ ಮತ್ತು ದಾಂತೇವಾಡ ಜಿಲ್ಲೆಗಳ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಮುಲೇರ್ ಗ್ರಾಮದ ಬಳಿಯ ಗುಡ್ಡಗಾಡು ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ 3.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ.

‌ಕೆರ್ಲಾಪಾಲ್ ಪ್ರದೇಶ ಸಮಿತಿಯ ಮಾವೋವಾದಿಗಳ ಗುಂಪುಗಸ್ತು ತಿರುಗುತ್ತಿದ್ದ ತಂಡದ ಮೇಲೆ ಗುಂಡು ಹಾರಿಸಿತು. ನಂತರ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯ ಮುಂದುವರಿದಿದೆಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.