ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ 103 ನಕ್ಸಲರ ಪೈಕಿ 49 ನಕ್ಸಲರು ಗುರುವಾರ ಶರಣಾಗಿದ್ದಾರೆ. ಇವರಲ್ಲಿ 22 ಮಹಿಳೆಯರೂ ಸೇರಿದ್ದಾರೆ.
ಈ ನಕ್ಸಲರ ಮಾಹಿತಿ ನೀಡಿದವರಿಗೆ ₹1 ಕೋಟಿ ಬಹುಮಾನ ಮೊತ್ತ ಘೋಷಿಸಲಾಗಿತ್ತು.
ಛತ್ತೀಸಗಢದಲ್ಲಿ ಎಡಪಂಥೀಯ ಸಂಘಟನೆಗೆ ಸೇರಿದವರು ಇಷ್ಟು ದೊಡ್ಡ ಪ್ರಮಾಣದಲ್ಲಿ ಒಂದೇ ದಿನದಲ್ಲಿ ಶರಣಾಗತಿಯಾಗಿರುವುದು ಇದೇ ಮೊದಲು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಕ್ಸಲ್ ಸಾವು: ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ನಕ್ಸಲ್ ಮೃತಪಟ್ಟಿದ್ದಾನೆ.
ಗಂಗಲೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿಯು ಬೆಳಿಗ್ಗೆ 11ರ ಸುಮಾರಿಗೆ ನಕ್ಸಲ್ ನಿಗ್ರಹ ಕಾರ್ಯಾಚರಣೆ ನಡೆಯುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ. ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.