ADVERTISEMENT

ಛತ್ತೀಸ್‌ಗಡ: ಎನ್‌ಕೌಂಟರ್‌ನಲ್ಲಿ ನಕ್ಸಲನೊಬ್ಬ ಸಾವು

ಪಿಟಿಐ
Published 27 ಜೂನ್ 2021, 9:13 IST
Last Updated 27 ಜೂನ್ 2021, 9:13 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರಾಯಪುರ: ‘ಛತ್ತೀಸ್‌ಗಡದ ದಾಂತೇವಾಡ ಜಿಲ್ಲೆಯಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲನೊಬ್ಬ ಹತನಾಗಿದ್ದಾನೆ. ಈತನ ವಿರುದ್ಧ 25 ಪ್ರಕರಣಗಳು ದಾಖಲಾಗಿದ್ದು, ಅವನ ಪತ್ತೆಗಾಗಿ ಸರ್ಕಾರವು ₹5 ಲಕ್ಷ ನಗದು ಪುರಸ್ಕಾರ ಘೋಷಿಸಿತ್ತು’ ಎಂದು ಪೊಲೀಸರು ತಿಳಿಸಿದರು.

‘ನಕ್ಸಲ್‌ ನಿಗ್ರಹ ಕಾರ್ಯಾಚರಣೆ ವೇಳೆ ಜಿಲ್ಲಾ ಮೀಸಲು ಪಡೆ(ಡಿಆರ್‌ಜಿ) ಮತ್ತು ನಕ್ಸಲರ ನಡುವೆ ಮಧ್ಯಾಹ್ನ 12.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಒಬ್ಬ ನಕ್ಸಲ ಹತನಾಗಿದ್ದಾನೆ. ಇನ್ನಿತರರು ಪರಾರಿಯಾಗಿದ್ದಾರೆ’ ಎಂದು ಅವರು ಹೇಳಿದರು.

‘ಮೃತ ನಕ್ಸಲನನ್ನು ಸಂತೋಷ್‌ ಮಾರ್ಕಂ ಎಂದು ಗುರುತಿಸಲಾಗಿದ್ದು, ಈತ ಮಲಂಗಿರಿ ಪ್ರದೇಶದಲ್ಲಿ ಸಕ್ರಿಯವಾಗಿರುವ ನಕ್ಸಲ್‌ ಗುಂಪಿನ ಸದಸ್ಯನಾಗಿದ್ದಾನೆ. ಘಟನಾ ಸ್ಥಳದಿಂದ ಪಿಸ್ತೂಲ್‌ ಸೇರಿದಂತೆ ದಿನಬಳಕೆಯ ವಸ್ತು ವಶಕ್ಕೆ ಪಡೆಯಲಾಗಿದೆ’ ಎಂದು ದಾಂತೇವಾಡ ಪೊಲೀಸ್‌ ವರಿಷ್ಠಾಧಿಕಾರಿ ಅಭಿಷೇಕ್‌ ಪಲ್ಲವ ಅವರು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.