ADVERTISEMENT

ಛತ್ತೀಸ್‌ಗಡ | ಗುಂಡಿನ ಚಕಮಕಿ: ನಾಲ್ಕು ನಕ್ಸಲರು ಸಾವು

ಪಿಟಿಐ
Published 12 ಆಗಸ್ಟ್ 2020, 7:45 IST
Last Updated 12 ಆಗಸ್ಟ್ 2020, 7:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಯ‌ಪುರ: ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಮತ್ತು ಭದ್ರತಾ ಪಡೆನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.

‘ಜಿಲ್ಲಾ ಮೀಸಲು ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ‘ಕೋಬ್ರಾ’ ಪಡೆಗಳು ಜಗರಗುಂಡ ಪ್ರಾಂತ್ಯದಲ್ಲಿಬುಧವಾರ ಬೆಳಿಗ್ಗೆ 9.30ರ ಸುಮಾರಿಗೆಜಂಟಿ ಕಾರ್ಯಾಚರಣೆ ನಡೆಸುತ್ತಿದ್ದವು.ಈ ವೇಳೆಫುಲಾಂಪರ್ ಗ್ರಾಮದ ಬಳಿ ಭದ್ರತಾ ಪಡೆಗೆ ನಕ್ಸಲರು ಮುಖಾಮುಖಿಯಾಗಿದ್ದಾರೆ. ಆಗ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ’ ಎಂದು ಐಜಿಪಿ ಪಿ. ಸುಂದರರಾಜ್‌ ಅವರು ಮಾಹಿತಿ ನೀಡಿದರು.

ಘಟನಾ ಸ್ಥಳದಿಂದ ರೈಫಲ್‌ ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.