ರಾಯಪುರ: ಛತ್ತೀಸಗಢದ ರಾಜಧಾನಿ ರಾಯಪುರದ ಸಿಲತರಾ ಹೊರವಲಯದಲ್ಲಿರುವ ಗೋದಾವರಿ ಇಸ್ಪಾತ್ ಲಿಮಿಟೆಡ್‌ನ ಉಕ್ಕಿನ ಕಾರ್ಖಾನೆಯಲ್ಲಿ ಶುಕ್ರವಾರ ಕಟ್ಟಡ ಕುಸಿದು ಐವರು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ.
ಸ್ಥಳಕ್ಕೆ ತೆರಳಿದ ಪೊಲೀಸರ ತಂಡವು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆ ಇರುವುದರಿಂದ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.