ADVERTISEMENT

ಛತ್ತೀಸ್‌ಗಡ: ಇಬ್ಬರು ನಕ್ಸಲರ ಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 10:50 IST
Last Updated 1 ಆಗಸ್ಟ್ 2022, 10:50 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ರಾಯಪುರ:ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿಇಬ್ಬರು ನಕ್ಸಲರನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ.

ಜಿಲ್ಲಾ ಮೀಸಲು ಪಡೆ(ಡಿಆರ್ಜಿ) ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ.

ಬೆಳಗ್ಗೆ 7.30ರ ಸುಮಾರಿಗೆ ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಗಸ್ತು ತೆರಳುತ್ತಿದ್ದಾಗ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ನಕ್ಸಲರು ಮೃತಪಟ್ಟಿದ್ದಾನೆ.

ADVERTISEMENT

ಭದ್ರತಾ ಪಡೆಗಳ ದಾಳಿಯಿಂದಾಗಿ ನಕ್ಸಲರು ಆ ಸ್ಥಳದಿಂದ ಪರಾರಿಯಾಗಿದ್ದಾರೆ. ಅಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.