ADVERTISEMENT

ಛತ್ತೀಸ್‌ಗಡ: ಸುಕ್ಮಾದಲ್ಲಿ ಇಬ್ಬರು ಪೊಲೀಸರ ಹತ್ಯೆ

ಪಿಟಿಐ
Published 16 ಏಪ್ರಿಲ್ 2021, 10:17 IST
Last Updated 16 ಏಪ್ರಿಲ್ 2021, 10:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸುಕ್ಮಾ: ಛತ್ತೀಸ್‌ಗಡದ ಸುಕ್ಮಾದಲ್ಲಿ ಇಬ್ಬರು ಪೊಲೀಸರನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹಾಯಕ ಪೇದೆಗಳಾದ ಧನಿರಾಮ್‌ ಕಾಶ್ಯಪ್ ಮತ್ತು ಪುನೇಮ್ ಹದ್ಮಾ ಅವರ ಮೃತದೇಹಗಳು ಸುಕ್ಮಾದ ಭೇಜ್ಜಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಗುರುವಾರ ಸಂಜೆ ಪತ್ತೆಯಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ದೊರೆತ ಮಾಹಿತಿ ಪ್ರಕಾರ, ಇದು ನಕ್ಸಲರ ಕೃತ್ಯ ಅಲ್ಲ ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ನಕ್ಸಲರ ಕರಪತ್ರಗಳೂ ದೊರೆತಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.