ADVERTISEMENT

ಐಎನ್‌ಎಕ್ಸ್‌ ಮೀಡಿಯಾ ಪ್ರಕರಣ: ಚಿದಂಬರಂಗೆ ಸುಪ್ರೀಂ ಕೋರ್ಟ್‌ನಲ್ಲಿ ತುಸು ರಿಲೀಫ್

ತಿಹಾರ್ ಜೈಲಿಗೆ ಕಳುಹಿಸದಂತೆ ಕೋರ್ಟ್ ಸೂಚನೆ * ಸಿಬಿಐ ಕಸ್ಟಡಿ ವಿಸ್ತರಣೆ

ಏಜೆನ್ಸೀಸ್
Published 2 ಸೆಪ್ಟೆಂಬರ್ 2019, 11:36 IST
Last Updated 2 ಸೆಪ್ಟೆಂಬರ್ 2019, 11:36 IST
   

ನವದೆಹಲಿ:ಐಎನ್‌ಎಕ್ಸ್‌ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ತುಸು ರಿಲೀಫ್ ದೊರೆತಿದೆ.

ಚಿದಂಬರಂ ಅವರನ್ನು ತಿಹಾರ್ ಜೈಲಿಗೆ ಕಳುಹಿಸದಂತೆ ಮತ್ತು ಸಿಬಿಐ ಪ್ರಧಾನ ಕಚೇರಿಯಲ್ಲೇ ಗುರುವಾರದವರೆಗೆ ಇರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಜತೆಗೆ, ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಪರಿಗಣಿಸುವಂತೆಯೂ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.

ADVERTISEMENT

ಚಿದಂಬರಂ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿ, ‘ಸಿಬಿಐ ಕಸ್ಟಡಿಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿರುವಾಗ ಅವರನ್ನು ತಿಹಾರ್ ಜೈಲಿಗೆ ಯಾಕೆ ಕಳುಹಿಸಬೇಕು? ಸದ್ಯದ ಮಟ್ಟಿಗೆ ಅವರಿಗೆ ಗೃಹಬಂಧನ ಸಾಕು. ನ್ಯಾಯ ಒದಗಿಸಬೇಕು’ ಎಂದು ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್‌, ಚಿದಂಬರಂ ಅವರನ್ನು ಜೈಲಿಗೆ ಕಳುಹಿಸದಂತೆ ಆದೇಶಿಸಿದೆ.

ಜಾಮೀನುರಹಿತ ವಾರಂಟ್ ಪ್ರಶ್ನಿಸಿ ಚಿದಂಬರಂ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿ ಆರ್.ಬಾನುಮತಿ ಮತ್ತು ಎ.ಎಸ್.ಬೋಪಣ್ಣ ಅವರಿದ್ದ ನ್ಯಾಯಪೀಠ ಸಿಬಿಐಗೆ ಸೂಚಿಸಿದೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.