ADVERTISEMENT

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

ಸುಪ್ರೀಂ ಕೋರ್ಟ್‌ಗೆ ಮೊರೆ

ಏಜೆನ್ಸೀಸ್
Published 20 ಆಗಸ್ಟ್ 2019, 11:01 IST
Last Updated 20 ಆಗಸ್ಟ್ 2019, 11:01 IST
ಚಿದಂಬರಂ
ಚಿದಂಬರಂ   

ನವದೆಹಲಿ:ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಇದರ ಬೆನ್ನಲ್ಲೇ ಚಿದಂಬರಂ ಅವರು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದಾರೆ.

ನಿರೀಕ್ಷಣಾ ಜಾಮೀನು ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಚಿದಂಬರಂ ಈ ಕ್ರಮ ಕೈಗೊಂಡಿದ್ದಾರೆ.

ಐಎನ್‌ಎಕ್ಸ್ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಜನವರಿ 25ರಂದು ಮುಕ್ತಾಯಗೊಳಿಸಿದ್ದ ದೆಹಲಿ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.

ಐಎನ್‌ಎಕ್ಸ್‌ ಮೀಡಿಯಾ ಕಂಪನಿಯಲ್ಲಿ ವಿದೇಶಿ ಹೂಡಿಕೆಗೆ ಅನುಮತಿ ನೀಡುವ ವೇಳೆ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಚಿದಂಬರಂ ಮೇಲಿದೆ. ಈ ಆರೋಪಕ್ಕೆ ಸಂಬಂಧಿಸಿ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.