ADVERTISEMENT

ಪ್ರಧಾನಿ ನೇತೃತ್ವದ ಉನ್ನತ ಸಮಿತಿಯಿಂದ ಹೊರಗುಳಿದ ಮುಖ್ಯ ನ್ಯಾಯಮೂರ್ತಿ

ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಆರೋಪಗಳ ತನಿಖೆ ವರದಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳುವ ಸಮಿತಿ

​ಪ್ರಜಾವಾಣಿ ವಾರ್ತೆ
Published 9 ಜನವರಿ 2019, 7:19 IST
Last Updated 9 ಜನವರಿ 2019, 7:19 IST
ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ
ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ   

ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ವಿರುದ್ಧದ ಆರೋಪಗಳ ತನಿಖೆಯ ನಂತರದ ತೀರ್ಮಾನವನ್ನು ತೆಗೆದುಕೊಳ್ಳುವ ಪ್ರಧಾನಿ ನೇತೃತ್ವದ ಉನ್ನತ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಹೊರಗುಳಿದಿದ್ದಾರೆ.

ವರ್ಮಾ ವಿರುದ್ಧದ ಆರೋಪಗಳ ತನಿಖೆ ವರದಿ ಪರಿಶೀಲನೆ ಸಂಬಂಧಿಸಿದಂತೆಒಂದು ವಾರದ ಒಳಗೆ ಉನ್ನತ ಸಮಿತಿಯು ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದ್ದು,ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಉನ್ನತ ಸಮಿತಿಗೆ ನ್ಯಾಯಮೂರ್ತಿ ಎ.ಕೆ.ಸಿಕ್ರಿ ಅವರನ್ನು ನೇಮಿಸಿದ್ದಾರೆ.

ಉನ್ನತ ಮಟ್ಟದ ಸಮಿತಿಯು ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಥವಾ ಅವರ ನಿರ್ದೇಶಿಸಿದ ನ್ಯಾಯಮೂರ್ತಿ ಒಳಗೊಂಡಿರಲಿದೆ. ವರ್ಮಾ ಅವರ ಅಧಿಕಾರಾವಧಿ ಜನವರಿ 31ಕ್ಕೆ ಕೊನೆಯಾಗಲಿದ್ದು, ಇನ್ನು ಒಂದು ವಾರದೊಳಗೆ ಸಮಿತಿಯು ನಿರ್ಧಾರ ತೆಗೆದುಕೊಳ್ಳಬೇಕಿದೆ.

ADVERTISEMENT

ವರ್ಮಾ ಅವರನ್ನು ದೀರ್ಘ ರಜೆಯ ಮೇಲೆ ಕಳುಹಿಸಿ ಕೇಂದ್ರ ಸರ್ಕಾರ ಮತ್ತು ಕೇಂದ್ರ ಜಾಗೃತ ಆಯೋಗ (ಸಿವಿಸಿ) ಅಕ್ಟೋಬರ್‌ನಲ್ಲಿ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಪಡಿಸಿತ್ತು. ಬುಧವಾರ ಸಿಬಿಐ ಮುಖ್ಯಸ್ಥ ಅಲೋಕ್‌ ವರ್ಮಾ ದೆಹಲಿಯ ಕಚೇರಿಗೆ ಮರಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.