ADVERTISEMENT

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಿಸಲು ಮೋದಿಗೆ ಸಿಜೆಐ ಪತ್ರ 

ಏಜೆನ್ಸೀಸ್
Published 23 ಜೂನ್ 2019, 5:17 IST
Last Updated 23 ಜೂನ್ 2019, 5:17 IST
   

ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಮತ್ತು ಹೈಕೋರ್ಟ್‌ನ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ಏರಿಸುವಂತೆ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಅವರು ಶನಿವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಪ್ರಧಾನಿಗೆ ಮೂರು ಪತ್ರಗಳನ್ನು ಮುಖ್ಯನ್ಯಾಯಮೂರ್ತಿಗಳು ಬರೆದಿದ್ದಾರೆ. ‘ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ನಾನು ತಮ್ಮಲ್ಲಿ ಮನವಿ ಮಾಡುತ್ತಿದ್ದೇನೆ. ಇದನ್ನು ಆದ್ಯತೆ ಮೇರೆಗೆಪರಿಗಣಿಸಬೇಕು. ಇದರ ಮೂಲಕ ಮಾತ್ರ ನ್ಯಾಯಾಂಗ ವ್ಯವಸ್ಥೆ ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸಮರ್ಥವಾಗಿ ಕೆಲಸ ಮಾಡಲು ಸಾಧ್ಯ. ಮತ್ತು, ಶೀಘ್ರ ನ್ಯಾಯದಾನ ಸಾಧ್ಯ,’ ಎಂದು ಅವರು ಬರೆದ್ದಾರೆ.

ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರು ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಲು, ವಿಧಿ 128 ಮತ್ತು 224(ಎ) ಅಡಿಯಲ್ಲಿ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆಯೂ ಅವರು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.