ADVERTISEMENT

ಪೋಷಣ್ ಯೋಜನೆ: ಮಗುವಿನ ಆಧಾರ್‌ ಕಾರ್ಡ್‌ ಕಡ್ಡಾಯವಲ್ಲ

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 13:38 IST
Last Updated 30 ಜೂನ್ 2022, 13:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಪೋಷಣ್‌ ಯೋಜನೆ ಅಡಿ ಪ್ರಯೋಜನ ಪಡೆದುಕೊಳ್ಳಲು ಮಗುವಿನ ಆಧಾರ ಕಾರ್ಡ್‌ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ತಾಯಿಯ ಬಯೋಮೆಟ್ರಿಕ್‌ ಕಾರ್ಡ್‌ ಬಳಸಿ ಪೋಷಣ್ ಟ್ರ್ಯಾಕರ್‌ ಆ್ಯಪ್‌ನಲ್ಲಿ ನೋಂದಣಿ ಮಾಡಬಹುದು ಎಂದು ತಿಳಿಸಿದೆ.

ಪೌಷ್ಟಿಕ ಆಹಾರ ಪಡೆಯಲು ಲಕ್ಷಾಂತರ ಮಕ್ಕಳಿಗೆ ಆಧಾರ್‌ ಕಾರ್ಡ್ ಅಗತ್ಯ ಎಂಬ ಮಾಧ್ಯಮ ವರದಿಗೆ ಸ್ಪಷ್ಟನೆ ನೀಡಿರುವ ಸಚಿವಾಲಯ, ಮಗುವಿನ ಆಧಾರ್ ಕಾರ್ಡ್ ಕಡ್ಡಾಯವಲ್ಲ. ತಾಯಿಯ ಆಧಾರ ಬಳಸಿ ಫಲಾನುಭವಿಗಳಿಗೆ ಯೋಜನೆ ತಲುಪಿಸಬೇಕು ಎಂದು ತಿಳಿಸಿದೆ.

ಕೇಂದ್ರ ವಾರ್ತಾ ಇಲಾಖೆ ಫಾಕ್ಟ್‌ ಚೆಕ್‌ ಸಹ ಈ ಬಗ್ಗೆ ಟ್ವೀಟ್‌ ಮೂಲಕ ಸ್ಪಷ್ಟನೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.