ADVERTISEMENT

ಗಡಿಯಲ್ಲಿ ಸೇನಾ ನಿಯೋಜನೆ ಹೆಚ್ಚಿಸುತ್ತಿರುವ ಚೀನಾ: ಲೆಫ್ಟಿನೆಂಟ್ ಜನರಲ್ ಪಾಂಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಅಕ್ಟೋಬರ್ 2021, 13:39 IST
Last Updated 19 ಅಕ್ಟೋಬರ್ 2021, 13:39 IST
 ಪೂರ್ವ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ
ಪೂರ್ವ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ    

ರುಪಾ: ಅರುಣಾಚಲ ಪ್ರದೇಶಕ್ಕೆ ಹೊಂದಿಕೊಂಡಂತಿರುವವಾಸ್ತವ ಗಡಿ ನಿಯಂತ್ರಣ ರೇಖೆ ಪ್ರದೇಶಗಳಲ್ಲಿ ಚೀನಾವು ಸೇನೆ ಮತ್ತು ಶಸ್ತ್ರಾಸ್ತ್ರಗಳ ನಿಯೋಜನೆ ಹೆಚ್ಚಿಸಿದೆ. ಈ ಪ್ರದೇಶದಲ್ಲಿ ಎದುರಾಗುವ ಯಾವುದೇ ಸವಾಲುಗಳನ್ನು ಎದುರಿಸಲು ಭಾರತವು ಯೋಜನೆಗಳನ್ನು ಸಿದ್ಧಪಡಿಸಿದೆ ಎಂದು ಪೂರ್ವ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಮಂಗಳವಾರ ಹೇಳಿದ್ದಾರೆ.

ಭಾರತದ ಒಟ್ಟಾರೆ ಸೇನಾ ಆಧುನೀಕರಣದ ಕುರಿತು ಮಾಹಿತಿ ನೀಡಿದ ಲೆಫ್ಟಿನೆಂಟ್ ಜನರಲ್ ಪಾಂಡೆ, ‘ಹೆಚ್ಚು ಪರಿಣಾಮಕಾರಿ ವಿಧಾನದೊಂದಿಗೆ ಕ್ಷಿಪ್ರವಾಗಿ ಸಜ್ಜುಗೊಳಿಸಬಹುದಾದ ಇಂಟಿಗ್ರೇಟೆಡ್ ಬ್ಯಾಟಲ್ ಗ್ರೂಪ್ಸ್ (ಐಬಿಜಿ) ಎಂಬ ಹೊಸ ಯುದ್ಧ ವ್ಯೂಹ ರಚನೆಗೆ ತಾತ್ವಿಕ ಅನುಮೋದನೆ ನೀಡಲಾಗಿದೆ,’ ಎಂದೂ ತಿಳಿಸಿದರು.

ಕಾಲಾಳುಪಡೆ, ಫಿರಂಗಿ, ವಾಯು ಪಡೆ, ಟ್ಯಾಂಕ್ ಮತ್ತು ಶಸ್ತ್ರಾಸ್ತ್ರ ರವಾನೆ ಘಟಕಗಳನ್ನು ಐಬಿಜಿ ಒಳಗೊಂಡಿರಲಿದೆ. ಈ ಹೊಸ ಯೋಜನೆಯು ಸೇನೆಯ ಯುದ್ಧ ಸಾಮರ್ಥ್ಯವನ್ನು ವಿಸ್ತರಿಸಲಿದೆ. ವಿಶೇಷವಾಗಿ ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಇದು ಹೆಚ್ಚಿನ ಬಲ ತಂದು ಕೊಡಲಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.