ನವದೆಹಲಿ: ಚೀನಾದ ಸುದ್ದಿ ಸಂಸ್ಥೆಗಳಾದ ಗ್ಲೋಬಲ್ ಟೈಮ್ಸ್ ಮತ್ತು ಕ್ಸಿನ್‌ಹುವಾದ ಸಾಮಾಜಿಕ ಮಾಧ್ಯಮ ಎಕ್ಸ್ (X) ಖಾತೆಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ.
ಎರಡೂ ಖಾತೆಗಳನ್ನು ತೆರೆದಾಗ, ‘ಕಾನೂನು ವಿನಂತಿಯ ಮೇರೆಗೆ ಭಾರತದಲ್ಲಿ ಖಾತೆಗಳನ್ನು ತಡೆಹಿಡಿಯಲಾಗಿದೆ’ ಎಂದು ತೋರಿಸುತ್ತಿದೆ ಎಂಬುದಾಗಿ ವರದಿಯಾಗಿದೆ.
ಅರುಣಾಚಲದ ಕೆಲವು ಸ್ಥಳಗಳಿಗೆ ಮರುನಾಮಕರಣ ಮಾಡುವ ಚೀನಾದ ಪ್ರಯತ್ನಗಳನ್ನು ಭಾರತ ಬುಧವಾರ ತಿರಸ್ಕರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
‘ಚೀನಾ ಯತ್ನಗಳು ನಮ್ಮ ಗಮನಕ್ಕೆ ಬಂದಿವೆ, ಅರುಣಾಚಲ ಭಾರತದ ರಾಜ್ಯವಾಗಿದ್ದು ಚೀನಾದ ನಿಷ್ಪ್ರಯೋಜಕ, ಅಸಂಬದ್ಧ, ಅವಿವೇಕದ ಪ್ರಯತ್ನಗಳು ಸಫಲವಾಗುವುದಿಲ್ಲ. ಅರುಣಾಚಲ ಪ್ರದೇಶ ಎಂದಿಗೂ ಭಾರತದ ಅವಿಭಾಜ್ಯ. ಅದನ್ನು ಬೇರ್ಪಡಿಸಲಾಗದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.