ADVERTISEMENT

ಅರುಣಾಚಲ ಪ್ರದೇಶದ 11 ಸ್ಥಳಗಳ ಹೆಸರು ಬದಲಿಸಿದ ಚೀನಾ

ಪಿಟಿಐ
Published 3 ಏಪ್ರಿಲ್ 2023, 14:59 IST
Last Updated 3 ಏಪ್ರಿಲ್ 2023, 14:59 IST
   

ಬೀಜಿಂಗ್‌: ಅರುಣಾಚಲ ಪ್ರದೇಶದಲ್ಲಿ ಹಕ್ಕು ಸಾಧಿಸುವ ಸಲುವಾಗಿ ಚೀನಾವು ಮತ್ತೆ ಇಲ್ಲಿನ 11 ಸ್ಥಳಗಳ ಹೆಸರುಗಳನ್ನು ಬದಲಿಸಿದೆ.

ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಮೂರನೇ ಹಂತದಲ್ಲಿ ಹೆಸರುಗಳನ್ನು ಬದಲಿಸಿದೆ ಎಂದು ‘ಗ್ಲೋಬಲ್ ಟೈಮ್ಸ್‌’ ಸೋಮವಾರ ವರದಿ ಮಾಡಿದೆ.

ಅರುಣಾಚಲ ಪ್ರದೇಶದ ಆರು ಸ್ಥಳಗಳಿಗೆ 2017ರಲ್ಲಿ ಹಾಗೂ 15 ಸ್ಥಳಗಳಿಗೆ 2021ರಲ್ಲಿ ಚೀನಾ ಮರುನಾಮಕರಣ ಮಾಡಿತ್ತು.

ADVERTISEMENT

ಚೀನಾದ ಈ ನಡೆಯನ್ನು ಭಾರತವು ಈ ಹಿಂದೆಯೇ ತಳ್ಳಿಹಾಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.