ADVERTISEMENT

ಕೋವಿಡ್: ನಿರ್ಬಂಧ ಬಿಗಿಗೊಳಿಸಿದ ಚೀನಾ

ಏಜೆನ್ಸೀಸ್
Published 12 ನವೆಂಬರ್ 2022, 12:42 IST
Last Updated 12 ನವೆಂಬರ್ 2022, 12:42 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೀಜಿಂಗ್‌ (ಎಪಿ): ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾದ ಹಿನ್ನೆಲೆಯಲ್ಲಿ ಚೀನಾ ನಿರ್ಬಂಧಗಳನ್ನು ಮತ್ತಷ್ಟು ಕಠಿಣ ಮಾಡಿದೆ. 18 ಲಕ್ಷ ಜನಸಂಖ್ಯೆ ಇರುವ ದಕ್ಷಿಣ ಚೀನಾದ ಗ್ವಾಂಗ್ಝೌ ನಗರದಲ್ಲಿ ಯಾರೂ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ, ಶಾಲೆಗಳನ್ನು ಬಂದ್ ಮಾಡಲಾಗಿದೆ.

ರಾಷ್ಟ್ರೀಯ ಆರೋಗ್ಯ ಆಯೋಗದ ಪ್ರಕಾರ ಗ್ವಾಂಗ್ಝೌನಲ್ಲಿ ಒಟ್ಟು 3,775 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 2,996 ಪ್ರಕರಣಗಳು ಸೋಂಕು ಲಕ್ಷಣರಹಿತವಾಗಿವೆ.

ಸೋಂಕು ಏರಿಕೆ ಹಿನ್ನೆಲೆಯಲ್ಲಿ ಮನೆಯಿಂದ ಯಾರೂ ಹೊರಬರದಂತೆ ಕಟ್ಟುನಿಟ್ಟಾಗಿ ತಿಳಿಸಲಾಗಿದೆ. ಆಹಾರ ಖರೀದಿಗೆ ಮನೆಯಿಂದ ಒಬ್ಬರು ಮಾತ್ರ ಹೊರಬರಲು ಅವಕಾಶ ನೀಡಲಾಗಿದೆ. ಹಾಗೆಯೇ ಇಲ್ಲಿಂದ ಚೀನಾ ರಾಜಧಾನಿ ಬೀಜಿಂಗ್‌ ಅಥವಾ ಮತ್ತಿತರ ಪ್ರಮುಖ ನಗರಗಳಿಗೆ ತೆರಳುವ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.ದೇಶದಾದ್ಯಂತ ಸೂಪರ್‌ ಮಾರುಕಟ್ಟೆ ಅಥವಾ ಸಾರ್ವಜನಿಕ ಕಟ್ಟಡಗಳ ಒಳಗೆ ಪ್ರವೇಶಿಸಲು ಕೋವಿಡ್ ನೆಗೆಟಿವ್‌ ಪ್ರಮಾಣಪತ್ರವನ್ನು ಕಡ್ಡಾಯ ಮಾಡಲಾಗಿದೆ.

ADVERTISEMENT

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 11,773 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 10,351 ಮಂದಿಗೆ ಸೋಂಕು ಲಕ್ಷಣರಹಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.