ನವದೆಹಲಿ: ಗಡಿ ವಿಷಯ ಕುರಿತಂತೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಅವರ ಜೊತೆ ಚರ್ಚಿಸಲು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಸೋಮವಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಶಾಂಘೈ ಸಹಕಾರ ಸಂಘಟನೆಯ ವಾರ್ಷಿಕ ಸಮ್ಮೇಳನದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಪ್ರವಾಸ ಕೈಗೊಳ್ಳಲು ಯೋಜಿಸಿದಾಗಲೇ ವಾಂಗ್ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ವಿದೇಶಾಂಗ ಸಚಿವಾಲಯವು ಶನಿವಾರ ತಿಳಿಸಿದೆ.
ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಎರಡೂ ರಾಷ್ಟ್ರಗಳ ವಿಶೇಷ ಪ್ರತಿನಿಧಿಗಳಾಗಿ ಮಾತುಕತೆ ನಡೆಸಲು ಡೊಬಾಲ್ ಹಾಗೂ ವಾಂಗ್ ನೇಮಕಗೊಂಡಿದ್ದಾರೆ.
ಡೊಬಾಲ್ ಆಹ್ವಾನದ ಮೇರೆಗೆ ಆ.18ರಂದು ಭಾರತ ಪ್ರವಾಸ ಕೈಗೊಳ್ಳಲಿರುವ ವಾಂಗ್, ಎರಡು ದಿನ ಭಾರತದಲ್ಲಿರಲಿದ್ದಾರೆ. ಇದು 24ನೇ ಸುತ್ತಿನ ಮಾತುಕತೆಯಾಗಿದೆ ಎಂದು ವಿದೇಶಾಂಗ ಸಚಿವಾಲಯವು ತಿಳಿಸಿದೆ.
ವಿದೇಶಾಂಗ ಸಚಿವ ಎಸ್. ಜೈಶಂಕರ್ ಸಹ ಇದೇ ಸಂದರ್ಭ ಚೀನಾದ ವಿದೇಶಾಂಗ ಸಚಿವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿದೆ.
Highlights - null
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.