ADVERTISEMENT

ಬಿಹಾರ ಚುನಾವಣೆ: ಚಿರಾಗ್‌, ಪ್ರಶಾಂತ್‌ ಕಿಶೋರ್ ಪಕ್ಷಗಳ ನಡುವೆ ಮೈತ್ರಿ ಸಾಧ್ಯತೆ?

ಏಜೆನ್ಸೀಸ್
Published 7 ಅಕ್ಟೋಬರ್ 2025, 10:33 IST
Last Updated 7 ಅಕ್ಟೋಬರ್ 2025, 10:33 IST
ಪ್ರಶಾಂತ್‌ ಕಿಶೋರ್
ಪ್ರಶಾಂತ್‌ ಕಿಶೋರ್   

ಪಟ್ನಾ: ಬಿಹಾರ ರಾಜಕಾರಣದಲ್ಲಿ ಚಿರಾಗ್‌ ಪಾಸ್ವಾನ್‌ ನೇತೃತ್ವದ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ) ಹಾಗೂ ಚುನಾವಣೆ ಚಾಣಕ್ಷ ಖ್ಯಾತಿಯ ಪ್ರಶಾಂತ್‌ ಕಿಶೋರ್ ನೇತೃತ್ವದ 'ಜನ ಸುರಾಜ್‌‘ ಪಕ್ಷದ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆಗಳಿವೆ ಎಂದು ಎಲ್‌ಜೆಪಿ ಪಕ್ಷದ ಮೂಲಗಳು ತಿಳಿಸಿವೆ.

ನವೆಂಬರ್‌ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಚಿರಾಗ್‌ ಪಾಸ್ವಾನ್‌ ಹಾಗೂ ಬಿಜೆಪಿ ನಡುವೆ ಸೀಟು ಹಂಚಿಕೆ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಚಿರಾಗ್‌ ಎನ್‌ಡಿಎ ಮೈತ್ರಿಕೂಟದಿಂದ ಹೊರ ಬರಲಿದ್ದಾರೆ ಎನ್ನಲಾಗಿದೆ. 

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಜೆಪಿ ಪಕ್ಷಕ್ಕೆ 5 ಸ್ಥಾನಗಳನ್ನು ನೀಡಲಾಗಿತ್ತು. ಎಲ್ಲಾ ಸ್ಥಾನಗಳಲ್ಲೂ ಎಲ್‌ಜೆಪಿ ಗೆಲುವು ದಾಖಲಿಸಿತ್ತು. ಈ ಹಿನ್ನೆಯಲ್ಲಿ 40 ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಚಿರಾಗ್‌ ಕೇಳುತ್ತಿದ್ದಾರೆ. ಆದರೆ ಬಿಜೆಪಿ 25 ಸ್ಥಾನಗಳನ್ನು ಕೊಡುವುದಾಗಿ ಹೇಳಿದೆ.

ADVERTISEMENT

ಈ ಹಿನ್ನೆಲೆಯಲ್ಲಿ ಚಿರಾಗ್‌ ಅವರು, ಪ್ರಶಾಂತ್‌ ಕಿಶೋರ್ ನೇತೃತ್ವದ 'ಜನ ಸುರಾಜ್‌‘ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಬಲ್ಲ ಮೂಲಗಳ ಪ್ರಕಾರ 243 ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಎನ್‌ಡಿಎ ತಲಾ 100 ಸ್ಥಾನ ಹಂಚಿಕೊಂಡು ಉಳಿದ ಸ್ಥಾನಗಳನ್ನು ಇತರೆ ಪಕ್ಷಗಳಿಗೆ ಬಿಟ್ಟುಕೊಡಲಿದ್ದಾರೆ ಎನ್ನಲಾಗಿದೆ.

ಆದಾಗ್ಯೂ ಬಿಜೆಪಿ ಈ ವರದಿಗಳನ್ನು ತಳ್ಳಿಹಾಕಿದ್ದು ಚಿರಾಗ್‌ ಅವರು ಮೈತ್ರಿ ತೊರೆಯುವುದಿಲ್ಲ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.