
ಅಪಘಾತದ ದೃಶ್ಯ
Credit: HMTVLive
ಪಲಮನೇರು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬುಧವಾರ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಲಮನೇರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿನಿಂದ ತಿರುಪತಿಗೆ ಪ್ರಯಾಣಿಸುತ್ತಿದ್ದ ಕಾರು ರಸ್ತೆಬದಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಐವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತಿವೇಗದ ಚಾಲನೆ ಅಥವಾ ಕಾರು ಚಾಲಕ ನಿದ್ರೆ ಮಂಪರಿನಲ್ಲಿದ್ದ ಕಾರಣಕ್ಕೆ ಅಪಘಾತ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಅಪಘಾತ ಕುರಿತು ಮೃತರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದ್ದು, ಮೃತದೇಹಗಳನ್ನು ಪಲಮನೇರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದೂ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.